ನಟ ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರವನ್ನು ಹಾಗೂ ರಿಷಬ್ ಶೆಟ್ಟಿಯನ್ನು ಹೊಗಳೋ ಭರದಲ್ಲಿ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದರು. ಇಲ್ಲಿನ ಸಂಸ್ಕೃತಿಗೆ ಅವಮಾನ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ರಣವೀರ್ ಸಿಂಗ್ ವಿರುದ್ಧ ಅನೇಕರು ಪೋಸ್ಟ್ಗಳನ್ನು ಮಾಡಿದ್ದರು. ಈ ವಿಷಯದಲ್ಲಿ ರಣವೀರ್ ಸಿಂಗ್ ಬೇಷರತ್ ಕ್ಷಮೆ ಕೇಳಿದ್ದಾರೆ. ಈ ಮೂಲಕ ವಿವಾದಕ್ಕೆ ಕೊನೆ ಹಾಡುವ ಪ್ರಯತ್ನ ಮಾಡಿದ್ದಾರೆ.
ರಣವೀರ್ ಅವರು ನಡೆದುಕೊಂಡ ರೀತಿಗೆ ಸಾಕಷ್ಟು ಟೀಕೆಗಳು ಕೇಳಿ ಬಂದವು. ಈಗ ರಣವೀರ್ ಅವರು ಈ ವಿಷಯವಾಗಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ಕ್ಷಮೆ ಕೇಳಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ‘ಚಿತ್ರದಲ್ಲಿ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಮುಖ್ಯ ಉದ್ದೇಶವಾಗಿತ್ತು. ಆ ದೃಶ್ಯವನ್ನು ಮಾಡಲು ಎಷ್ಟು ಶ್ರಮ ಬೇಕು ಎಂಬುದು ನನಗೆ ತಿಳಿದಿದೆ. ಹೀಗಾಗಿ ಅವರ ಬಗ್ಗೆ ನನಗೆ ಮೆಚ್ಚುಗೆ ಇದೆ’ ಎಂದಿದ್ದಾರೆ ರಣವೀರ್ ಸಿಂಗ್.
‘ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಮತ್ತು ನಂಬಿಕೆಯನ್ನು ನಾನು ಯಾವಾಗಲೂ ಆಳವಾಗಿ ಗೌರವಿಸುತ್ತೇನೆ. ನಾನು ಯಾರದ್ದಾದರೂ ಭಾವನೆಗಳಿಗೆ ನೋವುಂಟು ಮಾಡಿದ್ದರೆ, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ’ ಎಂದು ರಣವೀರ್ ಬರೆದುಕೊಂಡಿದ್ದಾರೆ.
ರಣವೀರ್ ಸಿಂಗ್ ಹಾಗೂ ರಿಷಬ್ ಶೆಟ್ಟಿ ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದರು. ಈ ವೇಳೆ ರಣವೀರ್ ಸಿಂಗ್ ಅವರು ರಿಷಬ್ ನಟನೆಯ ಕಾಂತಾರ ಚಿತ್ರವನ್ನು ಹೊಗಳಿದರು. ‘ದೈವ’ ಎನ್ನುವ ಬದಲು ‘ದೆವ್ವ’ ಎಂದರು. ಇಷ್ಟೇ ಅಲ್ಲ, ರಿಷಬ್ ಅವರು ದೈವವನ್ನು ಅನುಕರಿಸಿದಂತೆ ತಾವೂ ಅನುಕರಿಸಲು ಹೋದರು. ಇದು ಹಾಸ್ಯಾಸ್ಪದ ಎನಿಸಿತು. ರಣವೀರ್ ಓರ್ವ ಜೋಕರ್ ರೀತಿ ಕಾಣಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…