Featured

ದೈವಕ್ಕೆ ಅವಮಾನ ಮಾಡಿದ ಆರೋಪ;  ಕ್ಷಮೆ ಕೇಳಿದ ರಣವೀರ್ ಸಿಂಗ್ – vishwanews24

ದೈವಕ್ಕೆ ಅವಮಾನ ಮಾಡಿದ ಆರೋಪ;  ಕ್ಷಮೆ ಕೇಳಿದ ರಣವೀರ್ ಸಿಂಗ್

ನಟ ರಣವೀರ್ ಸಿಂಗ್ ಅವರು ‘ಕಾಂತಾರ’ ಚಿತ್ರವನ್ನು ಹಾಗೂ ರಿಷಬ್ ಶೆಟ್ಟಿಯನ್ನು ಹೊಗಳೋ ಭರದಲ್ಲಿ ಅವರು ಎಡವಟ್ಟೊಂದನ್ನು ಮಾಡಿಕೊಂಡಿದ್ದರು. ಇಲ್ಲಿನ ಸಂಸ್ಕೃತಿಗೆ ಅವಮಾನ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬೆನ್ನಲ್ಲೇ ರಣವೀರ್ ಸಿಂಗ್ ವಿರುದ್ಧ ಅನೇಕರು ಪೋಸ್ಟ್​ಗಳನ್ನು ಮಾಡಿದ್ದರು. ಈ ವಿಷಯದಲ್ಲಿ ರಣವೀರ್ ಸಿಂಗ್ ಬೇಷರತ್ ಕ್ಷಮೆ ಕೇಳಿದ್ದಾರೆ. ಈ ಮೂಲಕ ವಿವಾದಕ್ಕೆ ಕೊನೆ ಹಾಡುವ ಪ್ರಯತ್ನ ಮಾಡಿದ್ದಾರೆ.

ರಣವೀರ್ ಅವರು ನಡೆದುಕೊಂಡ ರೀತಿಗೆ ಸಾಕಷ್ಟು ಟೀಕೆಗಳು ಕೇಳಿ ಬಂದವು. ಈಗ ರಣವೀರ್ ಅವರು ಈ ವಿಷಯವಾಗಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ. ಕ್ಷಮೆ ಕೇಳಿ ಅವರು ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ‘ಚಿತ್ರದಲ್ಲಿ ರಿಷಬ್ ಅವರ ಅದ್ಭುತ ಅಭಿನಯವನ್ನು ಎತ್ತಿ ತೋರಿಸುವುದು ನನ್ನ ಮುಖ್ಯ ಉದ್ದೇಶವಾಗಿತ್ತು. ಆ ದೃಶ್ಯವನ್ನು ಮಾಡಲು ಎಷ್ಟು ಶ್ರಮ ಬೇಕು ಎಂಬುದು ನನಗೆ ತಿಳಿದಿದೆ. ಹೀಗಾಗಿ ಅವರ ಬಗ್ಗೆ ನನಗೆ ಮೆಚ್ಚುಗೆ ಇದೆ’ ಎಂದಿದ್ದಾರೆ ರಣವೀರ್ ಸಿಂಗ್.

‘ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಮತ್ತು ನಂಬಿಕೆಯನ್ನು ನಾನು ಯಾವಾಗಲೂ ಆಳವಾಗಿ ಗೌರವಿಸುತ್ತೇನೆ. ನಾನು ಯಾರದ್ದಾದರೂ ಭಾವನೆಗಳಿಗೆ ನೋವುಂಟು ಮಾಡಿದ್ದರೆ, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ’ ಎಂದು ರಣವೀರ್ ಬರೆದುಕೊಂಡಿದ್ದಾರೆ.

ರಣವೀರ್ ಸಿಂಗ್ ಹಾಗೂ ರಿಷಬ್ ಶೆಟ್ಟಿ ಗೋವಾ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದರು. ಈ ವೇಳೆ ರಣವೀರ್ ಸಿಂಗ್ ಅವರು ರಿಷಬ್​ ನಟನೆಯ ಕಾಂತಾರ ಚಿತ್ರವನ್ನು ಹೊಗಳಿದರು. ‘ದೈವ’ ಎನ್ನುವ ಬದಲು ‘ದೆವ್ವ’ ಎಂದರು. ಇಷ್ಟೇ ಅಲ್ಲ, ರಿಷಬ್ ಅವರು ದೈವವನ್ನು ಅನುಕರಿಸಿದಂತೆ ತಾವೂ ಅನುಕರಿಸಲು ಹೋದರು. ಇದು ಹಾಸ್ಯಾಸ್ಪದ ಎನಿಸಿತು. ರಣವೀರ್ ಓರ್ವ ಜೋಕರ್ ರೀತಿ ಕಾಣಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago