Featured

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದು ಬಿದ್ದ ಕಾಲು ಸಂಕ : 8 ಮಂದಿಗೆ ಗಾಯ – vishwanews24

ದೈವದ ಭಂಡಾರ ಮೆರವಣಿಗೆ ವೇಳೆ ಕುಸಿದು ಬಿದ್ದ ಕಾಲು ಸಂಕ : 8 ಮಂದಿಗೆ ಗಾಯ

ಮಂಗಳೂರು: ದೈವದ ಭಂಡಾರ  ಮೆರವಣಿಗೆ ವೇಳೆ ಕಾಲು ಸಂಕ ಕುಸಿದು ಬಿದ್ದು 8 ಮಂದಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ  ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ನಡೆದಿದೆ.

ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮಕ್ಕೆ ಕೊಂಡೊಯ್ಯುತ್ತಿದ್ದರು. ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗುತ್ತಿದ್ದಾಗ ಕಾಲು ಸಂಕ ಏಕಾಏಕಿ ಕುಸಿದು ಪಲ್ಲಕ್ಕಿ ಉರುಳಿ ಬಿದ್ದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: 

ಕೊಂಬು, ಕಹಳೆ, ಬ್ಯಾಂಡ್ ವಾದ್ಯಗಳೊಂದಿಗೆ ಮೆರವಣಿಗೆ ಸಾಗುತ್ತಿತ್ತು. ಕಾಲು ಸಂಕದ ಮೇಲೆ ಬಂದಾಗ ಏಕಾಏಕಿ ಮುರಿದು ಬಿದ್ದಿದೆ. ಅವಘಡದಲ್ಲಿ ಸುನಿಲ್ ಶೆಟ್ಟಿ ಮುಕಾಲ್ದಿ ಮಾರೂರು, ಲೋಕೇಶ್ ಭಂಡಾರಿ ಸೇರಿದಂತೆ ಪಲ್ಲಕ್ಕಿ ಹೊತ್ತವರನ್ನೂ ಒಳಗೊಂಡು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ಕಾಲು ಸಂಕ ಮುರಿದು ಕಲ್ಲಿನ ಬೀಮ್ ಪಲ್ಲಕ್ಕಿ ಹೊತ್ತವರ ಮೇಲೆ ಬಿದ್ದ ಪರಿಣಾಮ ಗಾಯಗಳಾಗಿದೆ. ಪಲ್ಲಕ್ಕಿಯಲ್ಲಿದ್ದ ದೈವದ ಮೊಗಮೂರ್ತಿ ಹಾಗೂ ಇತರ ಧಾರ್ಮಿಕ ಪರಿಕರಗಳಿಗೆ ಹಾನಿಯಾಗಿದೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

43 minutes ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

48 minutes ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

1 hour ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

19 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

19 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago