ಮಂಗಳೂರು: ಅತ್ತಾವರ ಬಾಬುಗುಡ್ಡೆಯಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಹಾಗೂ ಭಗವಾನ್ ಶ್ರೀ ದೈವರಾಜ ಕೋರ್ದಬ್ಬು ದೈವಸ್ಥಾನದ ಕಾಣಿಕೆ ಹುಂಡಿಯೊಳಗೆ ಧಾರ್ಮಿಕ ಭಾವನೆಗೆ ಧಕ್ಕೆ ತರುವ ನಿಟ್ಟಿನಲ್ಲಿ ನೋಟಿನ ಮೇಲೆ ದೇವತೆಗಳ ಕುರಿತು ಅವಹೇಳನಕಾರಿ ಬರೆದು ಹಾಕಿರುವಂತಹ ಕೃತ್ಯವನ್ನು ಶಾಸಕ ವೇದವ್ಯಾಸ್ ಕಾಮತ್ ಖಂಡಿಸಿದ್ದಾರೆ.
ಧಾರ್ಮಿಕ ಭಾವನೆಗಳಿಗೆ ಚ್ಯುತಿ ತರುವಂತಹ ಕೃತ್ಯಗಳನ್ನು ಸಹಿಸುವುದು ಸಾಧ್ಯವಿಲ್ಲ. ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆಯಾದರೆ ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಉದ್ಧೇಶ ಪೂರ್ವಕವಾಗಿ ಇಂತಹ ಕೆಲಸ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರಗಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ನಕಲಿ ನೋಟಿನ ಮೇಲೆ ದೇವತೆಗಳ ಕುರಿತು ಅವಹೇಳನಕಾರಿ ಬರಹದಿಂದ ಸಮಾಜಕ್ಕೆ ಅತ್ಯಂತ ನೋವು ಉಂಟಾಗಿದೆ. ಈ ಕುರಿತು ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ತಕ್ಷಣವೇ ತಪ್ಪಿತಸ್ಥರನ್ನು ಬಂಧಿಸಿ ಕಾನೂನಾತ್ಮಕ ಕ್ರಮ ಜರಗಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…