ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಅವಹೇಳನಕಾರಿ ಬರಹ ಪ್ರಕರಣ : ಜಿಲ್ಲೆಯ ಕೋಮು ಸೌಹಾರ್ದತೆ ಯನ್ನು ಕೆದಡುವ ಹುನ್ನಾರ ನಡೆಯುತ್ತಿದೆ,ಇಂತಹ ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು : ಮಿಥುನ್ ರೈ ಆಗ್ರಹ -Vishwanews24
ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಅವಹೇಳನಕಾರಿ ಬರಹ ಪ್ರಕರಣ : ಜಿಲ್ಲೆಯ ಕೋಮು ಸೌಹಾರ್ದತೆ ಯನ್ನು ಕೆದಡುವ ಹುನ್ನಾರ ನಡೆಯುತ್ತಿದೆ,ಇಂತಹ ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು : ಮಿಥುನ್ ರೈ ಆಗ್ರಹ -Vishwanews24
ಮಂಗಳೂರು : ಮಹಾನಗರ ಪಾಲಿಕೆಯ ವ್ಯಾಪ್ತಿಯ ಮೂರು ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕೋಮು ದ್ವೇಷದ ಬರಹಗಳನ್ನು ಒಳಗೊಂಡ ನಕಲಿ ನೋಟು ಮತ್ತು ಇತರ ತ್ಯಾಜ್ಯ ವಸ್ತುಗಳನ್ನು ಹಾಕುವ ಮೂಲಕ ಅಪಚಾರವೆಸಗಲಾಗಿದೆ. ಈ ಕೃತ್ಯದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಕೋಮು ಸೌಹಾರ್ದತೆ ಯನ್ನು ಕೆದಡುವ ಹುನ್ನಾರ ನಡೆಯುತ್ತಿದೆ. ಇಂತಹ ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದಕ್ಷಿ ಣ ಕನ್ನಡ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದ್ದಾರೆ.
ಅತ್ತಾವರದ ಬಳಿ ರಸ್ತೆ ಬದಿ ಇರುವ ಎರಡು ದೈವಸ್ಥಾನಗಳ ಕಾಣಿಕೆ ಹುಂಡಿ ಹಾಗೂ ಊರ್ವ ಸ್ಟೋರ್ ಬಳಿಯ ಒಂದು ದೇವಸ್ಥಾನದ ಕಾಣಿಕೆ ಹುಂಡಿಗೆ ತ್ಯಾಜ್ಯ ವಸ್ತು ಗಳು, ಕೋಮು ದ್ವೇಷದ ಬರಹ ಹೊಂದಿರುವ ನಕಲಿ ನೋಟುಗಳನ್ನು ಕಿಡಿಗೇಡಿಗಳು ತುಂಬಿರುವುದು ಹುಂಡಿಯನ್ನು ತೆರೆದಾಗ ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ಚುನಾವಣೆ ಹತ್ತಿರವಾಗುವ ಸಮಯದಲ್ಲಿ ಈ ರೀತಿಯ ಕೃತ್ಯಗಳು ಈ ಹಿಂದೆಯೂ ನಡೆದಿದೆ. ಇಂತಹ ಕೃತ್ಯಗಳ ಮೂಲಕ ಜನ ಸಮುದಾಯದ ನಡುವೆ ಕೋಮುದ್ವೇಷ ಹುಟ್ಟಿಸುವ ಮೂಲಕ ರಾಜಕೀಯ ಲಾಭ ಪಡೆಯುವ ಯತ್ನ ನಡೆಯುತ್ತಿದೆ. ಇಂತಹ ಕೃತ್ಯ ನಡೆಸುವ ವ್ಯಕ್ತಿಗಳ ವಿರುದ್ಧ ಪೊಲೀಸ್ ಆಯುಕ್ತರು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಮಿಥುನ್ ರೈ ಆಗ್ರಹಿಸಿದ್ದಾರೆ.
ಧಾರ್ಮಿಕ ಸ್ಥಳಗಳ ಬಳಿ ಸಿ.ಸಿ.ಕ್ಯಾಮರಾ ಅಳವಡಿಕೆ ಅಗತ್ಯ:- ಈ ರೀತಿಯ ಕೃತ್ಯ ನಡೆಸುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಇಂತಹ ಹುಂಡಿ ಗಳು, ದೇವಸ್ಥಾನಗಳ ಬಳಿ ಸಿ.ಸಿ.ಕ್ಯಾಮರಾ ಅಳವಡಿಸಬೇಕೆಂದು ಮಿಥುನ್ ರೈ ಮನಪಾ ಆಯುಕ್ತರು ಹಾಗೂ ಪೊಲೀಸ್ ಆಯುಕ್ತರನ್ನು ಆಗ್ರಹಿಸಿದ್ದಾರೆ.
ಪಂಚಾಯತ್ ಚುನಾವಣೆ ಯಲ್ಲಿ ಮುಲ್ಕಿ, ಮೂಡುಬಿದಿರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿಂದಿಗಿಂತ ಉತ್ತಮ ಸಾಧನೆ ಮಾಡಿದೆ. ಹಳೆಯಂಗಡಿ ಗ್ರಾಮ ಪಂಚಾಯ ತ್ ನಲ್ಲಿ ಬಿಜೆಪಿ ಜೊತೆ ಎಸ್ ಡಿಪಿ ಐ ಸೇರಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಸೋಲಿಸುವ ಪ್ರಯತ್ನ ನಡೆದಿದೆ ಆದರೂ ಜಾತ್ಯತೀತ ತತ್ವದಲ್ಲಿ ನಂಬಿಕೆ ಹೊಂದಿರುವ ಮತದಾರರು ಕಾಂಗ್ರೆಸ್ ಗೆ ಬೆಂಬಲಿಸಿ ಮತ ನೀಡಿದ್ದಾರೆ ಎಂದು ಮಿಥುನ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ರುಗಳಾದ, ಸದಾಶಿವ ಉಳ್ಳಾಲ್, ಟಿ.ಕೆ.ಸುಧೀರ್, ರಘುರಾಜ ಕದ್ರಿ, ಅತ್ತಾವರ ದೈವಸ್ಥಾನದ ಗುರಿಕಾರ ಹೊನ್ನಯ್ಯ, ಮನಪಾ ಸದಸ್ಯ ಪ್ರವೀಣ್ ಚಂದ್ರ ಆಳ್ವ ಮೊದಲಾದ ವರು ಉಪಸ್ಥಿತರಿದ್ದರು.
http://ನೆಲ್ಯಾಡಿ : ಮೈಗೆ ಸೀಮೆ ಎಣ್ಣೆ ಸುರಿದು ಬೆಂಕಿಹಚ್ಚಿಕೊಂಡು ಯುವತಿ ಆತ್ಮಹತ್ಯೆ -Vishwanews24
