Featured

ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಅವಹೇಳನಕಾರಿ ಬರಹ ಪ್ರಕರಣ : ಜಿಲ್ಲೆಯ ಕೋಮು ಸೌಹಾರ್ದತೆ ಯನ್ನು ಕೆದಡುವ ಹುನ್ನಾರ ನಡೆಯುತ್ತಿದೆ,ಇಂತಹ ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು  : ಮಿಥುನ್ ರೈ ಆಗ್ರಹ -Vishwanews24

ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಅವಹೇಳನಕಾರಿ ಬರಹ ಪ್ರಕರಣ : ಜಿಲ್ಲೆಯ ಕೋಮು ಸೌಹಾರ್ದತೆ ಯನ್ನು ಕೆದಡುವ ಹುನ್ನಾರ ನಡೆಯುತ್ತಿದೆ,ಇಂತಹ ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು  : ಮಿಥುನ್ ರೈ ಆಗ್ರಹ -Vishwanews24

ಮಂಗಳೂರು : ಮಹಾನಗರ ಪಾಲಿಕೆಯ ವ್ಯಾಪ್ತಿಯ ಮೂರು ದೈವಸ್ಥಾನಗಳ ಕಾಣಿಕೆ ಹುಂಡಿಗಳಿಗೆ ಕೋಮು ದ್ವೇಷದ ಬರಹಗಳನ್ನು ಒಳಗೊಂಡ ನಕಲಿ ನೋಟು ಮತ್ತು ಇತರ ತ್ಯಾಜ್ಯ ವಸ್ತುಗಳನ್ನು ಹಾಕುವ ಮೂಲಕ ಅಪಚಾರವೆಸಗಲಾಗಿದೆ. ಈ ಕೃತ್ಯದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಕೋಮು ಸೌಹಾರ್ದತೆ ಯನ್ನು ಕೆದಡುವ ಹುನ್ನಾರ ನಡೆಯುತ್ತಿದೆ. ಇಂತಹ ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದಕ್ಷಿ ಣ ಕನ್ನಡ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಿಥುನ್ ರೈ ಆಗ್ರಹಿಸಿದ್ದಾರೆ.

ಅತ್ತಾವರದ ಬಳಿ ರಸ್ತೆ ಬದಿ ಇರುವ ಎರಡು ದೈವಸ್ಥಾನಗಳ ಕಾಣಿಕೆ ಹುಂಡಿ ಹಾಗೂ ಊರ್ವ ಸ್ಟೋರ್ ಬಳಿಯ ಒಂದು ದೇವಸ್ಥಾನದ ಕಾಣಿಕೆ ಹುಂಡಿಗೆ ತ್ಯಾಜ್ಯ ವಸ್ತು ಗಳು, ಕೋಮು ದ್ವೇಷದ ಬರಹ ಹೊಂದಿರುವ ನಕಲಿ ನೋಟುಗಳನ್ನು ಕಿಡಿಗೇಡಿಗಳು ತುಂಬಿರುವುದು ಹುಂಡಿಯನ್ನು ತೆರೆದಾಗ ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ಚುನಾವಣೆ ಹತ್ತಿರವಾಗುವ ಸಮಯದಲ್ಲಿ ಈ ರೀತಿಯ ಕೃತ್ಯಗಳು ಈ ಹಿಂದೆಯೂ ನಡೆದಿದೆ. ಇಂತಹ ಕೃತ್ಯಗಳ ಮೂಲಕ ಜನ ಸಮುದಾಯದ ನಡುವೆ ಕೋಮುದ್ವೇಷ ಹುಟ್ಟಿಸುವ ಮೂಲಕ ರಾಜಕೀಯ ಲಾಭ ಪಡೆಯುವ ಯತ್ನ ನಡೆಯುತ್ತಿದೆ. ಇಂತಹ ಕೃತ್ಯ ನಡೆಸುವ ವ್ಯಕ್ತಿಗಳ ವಿರುದ್ಧ ಪೊಲೀಸ್ ಆಯುಕ್ತರು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಮಿಥುನ್ ರೈ ಆಗ್ರಹಿಸಿದ್ದಾರೆ.

ಧಾರ್ಮಿಕ ಸ್ಥಳಗಳ ಬಳಿ ಸಿ.ಸಿ.ಕ್ಯಾಮರಾ ಅಳವಡಿಕೆ ಅಗತ್ಯ:- ಈ ರೀತಿಯ ಕೃತ್ಯ ನಡೆಸುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಇಂತಹ ಹುಂಡಿ ಗಳು, ದೇವಸ್ಥಾನಗಳ ಬಳಿ ಸಿ‌.ಸಿ.ಕ್ಯಾಮರಾ ಅಳವಡಿಸಬೇಕೆಂದು ಮಿಥುನ್ ರೈ ಮನಪಾ ಆಯುಕ್ತರು ಹಾಗೂ ಪೊಲೀಸ್ ಆಯುಕ್ತರನ್ನು ಆಗ್ರಹಿಸಿದ್ದಾರೆ.

ಪಂಚಾಯತ್ ಚುನಾವಣೆ ಯಲ್ಲಿ ಮುಲ್ಕಿ, ಮೂಡುಬಿದಿರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿಂದಿಗಿಂತ ಉತ್ತಮ ಸಾಧನೆ ಮಾಡಿದೆ. ಹಳೆಯಂಗಡಿ ಗ್ರಾಮ ಪಂಚಾಯ ತ್ ನಲ್ಲಿ ಬಿಜೆಪಿ ಜೊತೆ ಎಸ್ ಡಿಪಿ ಐ ಸೇರಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಸೋಲಿಸುವ ಪ್ರಯತ್ನ ನಡೆದಿದೆ ಆದರೂ ಜಾತ್ಯತೀತ ತತ್ವದಲ್ಲಿ ನಂಬಿಕೆ ಹೊಂದಿರುವ ಮತದಾರರು ಕಾಂಗ್ರೆಸ್ ಗೆ ಬೆಂಬಲಿಸಿ ಮತ ನೀಡಿದ್ದಾರೆ ಎಂದು ಮಿಥುನ್ ರೈ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ರುಗಳಾದ, ಸದಾಶಿವ ಉಳ್ಳಾಲ್, ಟಿ.ಕೆ.ಸುಧೀರ್, ರಘುರಾಜ ಕದ್ರಿ, ಅತ್ತಾವರ ದೈವಸ್ಥಾನದ ಗುರಿಕಾರ ಹೊನ್ನಯ್ಯ, ಮನಪಾ ಸದಸ್ಯ ಪ್ರವೀಣ್ ಚಂದ್ರ ಆಳ್ವ ಮೊದಲಾದ ವರು ಉಪಸ್ಥಿತರಿದ್ದರು.

http://ನೆಲ್ಯಾಡಿ : ಮೈಗೆ ಸೀಮೆ ಎಣ್ಣೆ ಸುರಿದು ಬೆಂಕಿಹಚ್ಚಿಕೊಂಡು ಯುವತಿ ಆತ್ಮಹತ್ಯೆ -Vishwanews24

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

11 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

11 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

11 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

12 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

13 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

13 hours ago