ಬೆಂಗಳೂರು : ಕಾಂತಾರ ಸಿನಿಮಾ ಬಗ್ಗೆ ವಿವಾದಾತ್ಮಕ ಪೋಸ್ಟ್ ವಿಚಾರದ ಬಗ್ಗೆ ಬೆಂಗಳೂರಲ್ಲಿ ನಟ ಚೇತನ್ ಮಾತನಾಡಿ ʻ ಭೂತಕೋಲ ಹಿಂದೂ ಧರ್ಮದಲ್ಲಿ ಬರೋದಿಲ್ಲʼ ಇದಕ್ಕೆ ಚೇತನ್ ಮತ್ತೆ ಸ್ಪಷ್ಟನೆ ನೀಡಿದ್ದಾರೆ
ಚೇತನ್ ಆಡಿದ ಮಾತುಗಳಿಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಶುರುವಾಗುತ್ತಿದ್ದಂತೆಯೇ ಅದಕ್ಕೆ ಸ್ಪಷ್ಟನೆ ಎನ್ನುವಂತೆ ಇಂದು ಮಾಧ್ಯಮ ಗೋಷ್ಠಿ ಕರೆದಿದ್ದರು ನಟ. ಅಲ್ಲಿಯೂ ತಾವಾಡಿದ ಮಾತಿಗೆ ಬದ್ಧರಾಗಿಯೇ ಮಾತನಾಡಿದರು. ಬುಡಕಟ್ಟು ನಮ್ಮ ಮೂಲ ಸಂಸ್ಕೃತಿ. ಇವರಿಗೆ 70 ಸಾವಿರ ವರ್ಷಕ್ಕೂ ಅಧಿಕ ಇತಿಹಾಸವಿದೆ. ಹಿಂದೂ ಧರ್ಮಕ್ಕೆ ಕೇವಲ ಮೂರುವರೆ ಸಾವಿರ ವರ್ಷ ಇತಿಹಾಸ. ದೈವಾರಾಧನೆ, ಭೂತಕೋಲ ಇವುಗಳು ಬುಡಕಟ್ಟು ಸಂಸ್ಕೃತಿಗಳು. ಅದು ಹೇಗೆ ಹಿಂದೂ ಸಂಸ್ಕೃತಿ ಆಗುತ್ತವೆ? ಎಂದು ನಿರೂಪಿಸಿದರು.
ರಿಷಬ್ ಶೆಟ್ಟಿ ಹೇಳಿದಂತೆ ಭೂತಕೋಲ ಹಿಂದೂ ಸಂಸ್ಕೃತಿಯಲ್ಲ: ನಟ ಚೇತನ್ – Vishwanews24
‘ಕಾಂತಾರ’ ಕುರಿತು ಪ್ರತಿಕ್ರಿಯಿಸಿದ್ದ ನಟ ಚೇತನ್ ಅಹಿಂಸಾ, ನಮ್ಮ ಕನ್ನಡದ ಚಲನಚಿತ್ರ ‘ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದರು. ಅದು ವಿವಾದಕ್ಕೆ ಕಾರಣವಾಗಿತ್ತು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…