ಪ್ರಯಾಗ್‌ರಾಜ್: ಮಹಾ ಕುಂಭಮೇಳಕ್ಕೆ ತೆರಳಿರುವ ಕನ್ನಡದ ಖ್ಯಾತ ನಿರೂಪಕಿ ಅನುಶ್ರೀಯವರು ತಮ್ಮ ದೈವಿಕ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಪುಣ್ಯ ನದಿಯಲ್ಲಿ ಮುಳುಗಿ ಏಳುವಾಗ ತುಂಬಾ ಭಾವುಕ ಅನುಭವವನ್ನು ನಾನು ಅನುಭವಿಸಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಆ ದೈವಿಕ ಅನುಭವ ಕುಂಭ ಮೇಳದಲ್ಲಿ ಭಾಗಿಯಾದವರರಿಗೆ ಮಾತ್ರ ಸಿಗುತ್ತದೆ. ಒಂದು ಬಿಸಿ ವಸ್ತುವನ್ನು ಮುಟ್ಟಿದವರಿಗೆ ಹೇಗೆ ತಿಳಿಯುತ್ತದೆಯೋ ಈ ಅನುಭವ ಸಹ ಹಾಗೆಯೇ. ಆ ಅದ್ಭುತ ಅನುಭವವನ್ನು ಸುಧಾರಿಸಿಕೊಳ್ಳಲು ಸ್ವಲ್ಪ ಸಮಯಬೇಕು. ಹರಹರ ಮಹಾದೇವ ಎಂದು ತೆರಳುವಾಗ ಅಲ್ಲಿನ ದೀಪಾಲಂಕಾರಗಳಲ್ಲಿ ಶಿವನೇ ಆಶೀರ್ವಾದ ಮಾಡುವಂತೆ ಕಾಣುತ್ತದೆ. ನಾನಂತೂ ನೀರಿನಲ್ಲಿ ಮುಳುಗಿದಾಗೆಲ್ಲ ಕಣ್ಣೀರು ಹಾಕಿದ್ದೇನೆ ಎಂದು ಅವರು ಹೇಳಿಕೊಂಡಿದ್ದಾರೆ.
144 ವರ್ಷಕ್ಕೆ ಒಮ್ಮೆ ಇದು ನಡೆಯೋದು, ಎಷ್ಟು ಜನರಿಗೆ ಈ ಅವಕಾಶ ಸಿಗುತ್ತೆ? ಎಲ್ಲಾ ಹೇಳ್ತಾರೆ ಇದು ಕಲಿಗಾಲ ಎಲ್ಲ ಪಾಪ ಮಾಡಿದವರು ಅಂತಾರೆ. ಆದರೆ ನನಗೆ ಅನ್ನಿಸಿದ್ದು, ಈ ಭಾಗ್ಯ ನಮಗೆ ಸಿಕ್ಕಿದೆ. ನಾವು ಪುಣ್ಯವಂತರು ಎಂದು ಹೇಳಿಕೊಂಡಿದ್ದಾರೆ.
ಇಲ್ಲಿ ಮಹಿಳೆಯರಿಗೆ ಸುರಕ್ಷತೆ ಇದೆ. ಇಂತಹ ವ್ಯವಸ್ಥೆ ಬಗ್ಗೆ ಹೆಮ್ಮೆ ಇದೆ. ಪೊಲೀಸ್ ಸಿಬ್ಬಂದಿ ಸಹ ಬಹಳ ಸಹಾಯ ಮಾಡುತ್ತಿದ್ದಾರೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ನಾವು ಐದು ದಿನಗಳ ಕಾಲ ಪ್ಲ್ಯಾನ್ ಮಾಡಿಕೊಂಡಿದ್ದೇವೆ. ಇನ್ನೂ ನಾವು ವಾರಣಾಸಿಗೆ ಹೋಗಬೇಕು. ಅಯೋಧ್ಯೆಯ ಬಾಲ ರಾಮನ ದರ್ಶನಕ್ಕೆ ಹೋಗಲು ಪ್ರಯತ್ನಿಸುತ್ತೇವೆ. ಇಂದು ಅಖಾಡಕ್ಕೆ ಹೋಗಿ ಸಾಧುಗಳ ಆಶೀರ್ವಾದ ಪಡೆಯಲು ತೆರಳುತ್ತಿದ್ದೇವೆ ಎಂದು ತಿಳಿಸಿದರು.
ಸಂಗಮದಲ್ಲಿ ಮಿಂದು.. ಕಣ್ಣುಗಳು ನೆಂದು ಭಗವಂತ ನೀನೆ ನಮಗೆಲ್ಲ ಅಂದು ಇಂದು ಇನ್ನೆಂದೆಂದು ಎಂದು.. ಬಂದು ಕೂತಾಗ ಮನಸ್ಸಿಗೆ ಸಿಕ್ಕ ನೆಮ್ಮದಿ ಸಿಗದು ಎಂದೆಂದು. ಕೋಟಿ ಜನ ಸೇರೋ ಜಾಗ. ಸಿಕ್ಕಾಪಟ್ಟೆ ಕಷ್ಟ ಯಾಕೆ ಬೇಕು ನಮಗೆ ಅಂತ ಮನೆಯಲ್ಲಿ ಕೂತಿದ್ದ್ರೆ ಈ ದೈವಿಕ ಅನುಭವ ಸಿಗುತ್ತಿರಲಿಲ್ಲ ಎಂದು ಅನುಶ್ರೀ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…