Featured

ದೊಡ್ಡವರು ಹೇಳಿದ ಮೇಲೆ, ನಾವು ಚಿಕ್ಕವರು ಗೌರವದಿಂದ ಕೇಳಿಕೊಂಡು ನಮ್ರತೆಯಿಂದ ಇರಬೇಕು : ಡಿ.ಕೆ.ಶಿ – vishwanews24

ದೊಡ್ಡವರು ಹೇಳಿದ ಮೇಲೆ, ನಾವು ಚಿಕ್ಕವರು ಗೌರವದಿಂದ ಕೇಳಿಕೊಂಡು ನಮ್ರತೆಯಿಂದ ಇರಬೇಕು : ಡಿ.ಕೆ.ಶಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ವರ್ಷ ಇರುವುದಿಲ್ಲ ಎಂದು ನಾವುಗಳು ಹೇಳಿಲ್ಲ. ಅವರೇ ತಾನು ಐದು ವರ್ಷ ಇರುವುದಾಗಿ ಹೇಳಿದ್ದಾರೆ. ದೊಡ್ಡವರು ಹೇಳಿದ ಮೇಲೆ, ನಾವು ಚಿಕ್ಕವರು ಗೌರವದಿಂದ ಕೇಳಿಕೊಂಡು ನಮ್ರತೆಯಿಂದ ಇರಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಶುಕ್ರವಾರವಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಅವರು ಎಲ್ಲವನ್ನು ಹೇಳಿದ್ದಾರಲ್ಲ. ಮುಖ್ಯಮಂತ್ರಿಯವರ ಅಧಿಕಾರವನ್ನು ನಾವುಗಳು ಯಾರೂ ಪ್ರಶ್ನೆ ಮಾಡಿಲ್ಲ. ಸಂಪುಟ ಪುನಾರಚನೆ ಬಗ್ಗೆ ಅವರೇ ಹೇಳಿದ್ದಾರೆ” ಎಂದರು.

ಅನಗತ್ಯವಾಗಿ ಊಹಾಪೋಹ ಸೃಷ್ಟಿಸಬೇಡಿ: ಅನಗತ್ಯವಾಗಿ ಊಹಾಪೋಹ ಸೃಷ್ಟಿಸಬೇಡಿ. ಕಾಂಗ್ರೆಸ್ ಪಕ್ಷಕ್ಕೆ ಹಿರಿಯರ ಸಲಹೆ, ಮಾರ್ಗದರ್ಶನ ಅವಶ್ಯಕತೆ ಇದೆಯೋ ಆಗ ನಾನು ಭೇಟಿ ಮಾಡುವೆ. ಅವರು ನಮ್ಮ ನಾಯಕರು, ನಮ್ಮ ಪಕ್ಷದ ಅಧ್ಯಕ್ಷರು. ಅವರು ಬಂದಾಗ ಅವರನ್ನು ಭೇಟಿ ಮಾಡುವುದು, ನಮ್ಮ ಕರ್ತವ್ಯ. ಶಿಷ್ಟಾಚಾರದ ಬಗ್ಗೆ ನನಗೆ ಬೇರೆಯವರಿಗಿಂತ ಹೆಚ್ಚಿನ ಅರಿವಿದೆ. ಅವರು ನಮ್ಮ ರಾಜ್ಯದವರೇ ಆದರೂ ಅವರ ಹಿರಿತನ ಹಾಗೂ ಹುದ್ದೆಗೆ ನಾವು ಗೌರವ ನೀಡಬೇಕು ಎಂದು ಶಿವಕುಮಾರ್ ತಿಳಿಸಿದರು.

“ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿ ಘೋಷಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಈ ವಿಚಾರವಾಗಿ ಗುರುವಾರ ಪರಿಷತ್ ಸದಸ್ಯರೊಂದಿಗೆ ಚರ್ಚೆ ಮಾಡಿರುವೆ. ನೀವುಗಳು ಚುನಾವಣೆ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೇಳಿರುವೆ. ಅವರೆಲ್ಲರೂ ಜವಾಬ್ದಾರಿ ಪಡೆದು ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ಮಂತ್ರಿಗಳಿಗೂ ಜವಾಬ್ದಾರಿ ನೀಡಬೇಕಿದೆ. ಇನ್ನು ಪರಿಷತ್ ಸಭಾಧ್ಯಕ್ಷರು ಹಾಗೂ ಉಪಸಭಾಧ್ಯಕ್ಷರ ಆಯ್ಕೆ ವಿಚಾರವಾಗಿ ಚರ್ಚೆ ಮಾಡಿರುವೆ” ಎಂದು ತಿಳಿಸಿದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

4 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

4 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

4 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

5 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

6 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

6 hours ago