ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ವರ್ಷ ಇರುವುದಿಲ್ಲ ಎಂದು ನಾವುಗಳು ಹೇಳಿಲ್ಲ. ಅವರೇ ತಾನು ಐದು ವರ್ಷ ಇರುವುದಾಗಿ ಹೇಳಿದ್ದಾರೆ. ದೊಡ್ಡವರು ಹೇಳಿದ ಮೇಲೆ, ನಾವು ಚಿಕ್ಕವರು ಗೌರವದಿಂದ ಕೇಳಿಕೊಂಡು ನಮ್ರತೆಯಿಂದ ಇರಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಶುಕ್ರವಾರವಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಅವರು ಎಲ್ಲವನ್ನು ಹೇಳಿದ್ದಾರಲ್ಲ. ಮುಖ್ಯಮಂತ್ರಿಯವರ ಅಧಿಕಾರವನ್ನು ನಾವುಗಳು ಯಾರೂ ಪ್ರಶ್ನೆ ಮಾಡಿಲ್ಲ. ಸಂಪುಟ ಪುನಾರಚನೆ ಬಗ್ಗೆ ಅವರೇ ಹೇಳಿದ್ದಾರೆ” ಎಂದರು.
ಅನಗತ್ಯವಾಗಿ ಊಹಾಪೋಹ ಸೃಷ್ಟಿಸಬೇಡಿ: ಅನಗತ್ಯವಾಗಿ ಊಹಾಪೋಹ ಸೃಷ್ಟಿಸಬೇಡಿ. ಕಾಂಗ್ರೆಸ್ ಪಕ್ಷಕ್ಕೆ ಹಿರಿಯರ ಸಲಹೆ, ಮಾರ್ಗದರ್ಶನ ಅವಶ್ಯಕತೆ ಇದೆಯೋ ಆಗ ನಾನು ಭೇಟಿ ಮಾಡುವೆ. ಅವರು ನಮ್ಮ ನಾಯಕರು, ನಮ್ಮ ಪಕ್ಷದ ಅಧ್ಯಕ್ಷರು. ಅವರು ಬಂದಾಗ ಅವರನ್ನು ಭೇಟಿ ಮಾಡುವುದು, ನಮ್ಮ ಕರ್ತವ್ಯ. ಶಿಷ್ಟಾಚಾರದ ಬಗ್ಗೆ ನನಗೆ ಬೇರೆಯವರಿಗಿಂತ ಹೆಚ್ಚಿನ ಅರಿವಿದೆ. ಅವರು ನಮ್ಮ ರಾಜ್ಯದವರೇ ಆದರೂ ಅವರ ಹಿರಿತನ ಹಾಗೂ ಹುದ್ದೆಗೆ ನಾವು ಗೌರವ ನೀಡಬೇಕು ಎಂದು ಶಿವಕುಮಾರ್ ತಿಳಿಸಿದರು.
“ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿ ಘೋಷಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಈ ವಿಚಾರವಾಗಿ ಗುರುವಾರ ಪರಿಷತ್ ಸದಸ್ಯರೊಂದಿಗೆ ಚರ್ಚೆ ಮಾಡಿರುವೆ. ನೀವುಗಳು ಚುನಾವಣೆ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೇಳಿರುವೆ. ಅವರೆಲ್ಲರೂ ಜವಾಬ್ದಾರಿ ಪಡೆದು ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ಮಂತ್ರಿಗಳಿಗೂ ಜವಾಬ್ದಾರಿ ನೀಡಬೇಕಿದೆ. ಇನ್ನು ಪರಿಷತ್ ಸಭಾಧ್ಯಕ್ಷರು ಹಾಗೂ ಉಪಸಭಾಧ್ಯಕ್ಷರ ಆಯ್ಕೆ ವಿಚಾರವಾಗಿ ಚರ್ಚೆ ಮಾಡಿರುವೆ” ಎಂದು ತಿಳಿಸಿದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…