ಮಡಿಕೇರಿ:ಕೊಡಗು ಜಿಲ್ಲೆಯ ಕೆಲವೆಡೆ ಮಂಗಳವಾರ ರಾತ್ರಿ ಇಡೀ ಧಾರಾಕಾರವಾಗಿ ಮಳೆ ಸುರಿದಿದೆ. ದೇವರಕೊಲ್ಲಿ ಹಾಗೂ ಕೊಯನಾಡು ನಡುವೆ ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕುಗಳು ಮೂಡಿವೆ.
ಇದರಿಂದ ಖಾಸಗಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹೆದ್ದಾರಿಯ ಸ್ಥಿತಿಯನ್ನು ಇಂದು ಪರಿಶೀಲಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯ ಭಾಗಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಗಡಿಭಾಗವಾದ ಕಲ್ಲುಗುಂಡಿ, ಸಂಪಾಜೆ, ಗೂನಡ್ಕ ಗ್ರಾಮಗಳ ಹಲವು ಭಾಗಗಳು ಜಲಾವೃತಗೊಂಡಿವೆ. ಪಯಸ್ವಿನಿ ನದಿ ಮತ್ತಷ್ಟು ಉಕ್ಕೇರಿ ಹರಿಯುತ್ತಿರುವುದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.
ಚೆಟ್ಟಳ್ಳಿ ಪಂಚಾಯಿತಿಯ ಪೊನ್ನತ್ ಮೊಟ್ಟೆ ಎಂಬಲ್ಲಿ ಅಜಿಜ್ ಮತ್ತು ಫಾತಿಮಾ ದಂಪತಿಯ ಮನೆಯ ಹಿಂಬದಿಯ ಮಣ್ಣು ಕುಸಿದು ಮರವೊಂದು ಮನೆ ಮೇಲೆ ಬಿದ್ದು ಹಾನಿಯಾಗಿದೆ. ದಬಡ್ಕ ರಸ್ತೆ ಹಾಗೂ ಕೊಯನಾಡು ಸೇತುವೆಗಳೂ ಹಾನಿಯಾಗಿವೆ.
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್.ಎಂ.ಬಿ. ಆರಾಧ್ಯ…