Featured

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು

ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು ನದಿ ಪಾಲಾದ ದಾರುಣ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಲ್ಗುಣಿ ನದಿಯಲ್ಲಿ ಬುಧವಾರ (ಏ.1) ಮುಂಜಾನೆ ಸಂಭವಿಸಿದೆ. ಕುಂಜತ್‌ಬೈಲ್ ನಿವಾಸಿಗಳಾದ ಗಣೇಶ್ (28), ರಾಯಲ್ (24) ನೀರುಪಾಲಾದ ಯುವಕರು.

ಬುಧವಾರ ಮುಂಜಾನೆ ಸುಮಾರು 1:30ರ ವೇಳೆಗೆ ಗಣೇಶ್, ರಾಯಲ್ ಹಾಗೂ ನಿತೇಶ್ ಫಲ್ಗುಣಿ ನದಿಗೆ ಮೀನು ಹಿಡಿಯಲು ತೆರಳಿದ್ದರು. ಈ ಸಂದರ್ಭದಲ್ಲಿ ಅವರು ಚಲಿಸುತ್ತಿದ್ದ ದೋಣಿ ಹಠಾತ್ತನೆ ನದಿಯಲ್ಲಿ ಮಗುಚಿ ಬಿದ್ದಿದೆ. ಈ ಸಮಯ ಈಜಲು ಬಾರದೆ ಗಣೇಶ್ ಹಾಗೂ ರಾಯಲ್ ನೀರುಪಾಲಾಗಿದ್ದು, ನಿತೇಶ್ ಈಜಿ ದಡ ಸೇರಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಮುಳುಗು ತಜ್ಞರು ತೀವ್ರ ಶೋಧ ಕಾರ್ಯ ನಡೆಸಿದ್ದು ಈ ವೇಳೆ ಗಣೇಶ್ ಎಂಬಾತನ ಮೃತದೇಹ ಪತ್ತೆಯಾಗಿದೆ.ರಾಯಲ್ ಎಂಬಾತನ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago