ಚಾಮರಾಜನಗರ: ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನ ಭಾರಿ ಅಸಮಧಾನದ ಬಳಿಕ ಮೈತ್ರಿ ಸರ್ಕಾರದಲ್ಲಿ ಇನ್ನೊಂದು ಅಸಮಾಧಾನ ಬಹಿರಂಗಗೊಂಡಿದ್ದು ಸಚಿವರ ವಿರುದ್ಧ ಇನ್ನೋರ್ವ ಸಚಿವರು ಏಕವಚನದಲ್ಲೇ ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪುಟ್ಟರಂಗ ಶೆಟ್ಟಿ ಅವರು ಬಿಎಸ್‌ಪಿಯ ಶಾಸಕ ಮತ್ತು ಸಚಿವ ಎನ್.ಮಹೇಶ್ ವಿರುದ್ಧ ಬಹಿರಂಗ ಅಸಮಾಧಾನ ಹೊರ ಹಾಕಿ ಕಿಡಿ ಕಾರಿದ್ದಾರೆ.
ಅವನ್ಯಾರು ನಮ್ಮನ್ನು ಕಿತ್ತು ಹಾಕುವುದಕ್ಕೆ? ನಾವು ಮನಸ್ಸು ಮಾಡಿದರೆ ಅವನೇ ಕಿತ್ತೋಗುತ್ತಾನೆ ಎಂದು ಸಚಿವ ಪುಟ್ಟರಂಗ ಶೆಟ್ಟಿ ಕಿಡಿ ಕಾರಿದ್ದಾರೆ.
ಅವನು ತಿಳಿದುಕೊಳ್ಳಬೇಕು ಅವನು ಒನ್ ಮ್ಯಾನ್ ಆರ್ಮಿ ಎಂದು .ಜೆಡಿಎಸ್ 36 , ಕಾಂಗ್ರೆಸ್ 80 ಸ್ಥಾನ ಹೊಂದಿದೆ. ಕಾಂಗ್ರೆಸ್ ಮನಸ್ಸು ಮಾಡಿದರೆ ಎನ್.ಮಹೇಶ್ ಹೋಗ್ತಾನೆ. ಈಗ ತಾನೇ ಕಣ್‌ಬಿಟ್ಟು ಎಲ್ಲವನ್ನೂ ಮಾಡುತ್ತೇನೆ ಎನ್ನುವುದು ಸರಿಯಲ್ಲ ಎಂದರು.
ಕಾಂಗ್ರೆಸ್ ಕಳೆಯನ್ನು ಬುಡ ಸಮೇತ ಕಿತ್ತು ಹಾಕುವುದಾಗಿ ಸಚಿವ ಎನ್.ಮಹೇಶ್ ಹೇಳಿಕೆ ನೀಡಿದ ವಿರುದ್ದ ಪುಟ್ಟರಂಗ ಶೆಟ್ಟಿ ಈ ಪರಿಯಲ್ಲಿ ಕಿಡಿ ಕಾರಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…