Featured

ದ್ರಾವಿಡ್ ಭಾರತೀಯ ಕ್ರಿಕೆಟ್‌ನ ಶ್ರೇಷ್ಠರು ಮತ್ತು ಅವರೊಂದಿಗೆ ಕೆಲಸ ಮಾಡುವುದು ಅತ್ಯಂತ ಸಂತೋಷದ ವಿಚಾರ : ರೋಹಿತ್ ಶರ್ಮಾ -Vishwanews24

ದ್ರಾವಿಡ್ ಭಾರತೀಯ ಕ್ರಿಕೆಟ್‌ನ ಶ್ರೇಷ್ಠರು ಮತ್ತು ಅವರೊಂದಿಗೆ ಕೆಲಸ ಮಾಡುವುದು ಅತ್ಯಂತ ಸಂತೋಷದ ವಿಚಾರ : ರೋಹಿತ್ ಶರ್ಮಾ -Vishwanews24

ಅಬುಧಾಬಿ: ರಾಹುಲ್ ದ್ರಾವಿಡ್ ಅವರನ್ನು ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ಆಗಿ ನೇಮಕ ಮಾಡಿರುವುದನ್ನು ಉಪನಾಯಕ ರೋಹಿತ್ ಶರ್ಮಾ ಸ್ವಾಗತಿಸಿದ್ದಾರೆ. ಆಟಗಾರರು ಬ್ಯಾಟಿಂಗ್ ಶ್ರೇಷ್ಠರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದಾರೆ ಎಂದು ಹೇಳಿದ್ದಾರೆ.

‘ನಾವು (ಅಫ್ಘಾನಿಸ್ತಾನದ ವಿರುದ್ಧ) ಪಂದ್ಯದಲ್ಲಿ ನಿರತರಾಗಿದ್ದೆವು. ಹಾಗಾಗಿ, ದ್ರಾವಿಡ್ ನೇಮಕದ ಬಗ್ಗೆ ತಿಳಿದಿರಲಿಲ್ಲ. ಭಾರತ ತಂಡಕ್ಕೆ ವಿಭಿನ್ನ ಸಾಮರ್ಥ್ಯದ ಮೂಲಕ ಮರಳಿ ಬಂದಿದ್ದಕ್ಕಾಗಿ ಅವರಿಗೆ (ರಾಹುಲ್ ದ್ರಾವಿಡ್) ಅಭಿನಂದನೆಗಳು. ನಾವು ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇವೆ ಎಂದು ಪಂದ್ಯದ ಬಳಿಕ ರೋಹಿತ್ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದ ಮಾಜಿ ಬಲಗೈ ಬ್ಯಾಟ್ಸ್‌ಮನ್ ದ್ರಾವಿಡ್ ಅವರನ್ನು, 2023ರ 50 ಓವರ್‌ಗಳ ವಿಶ್ವಕಪ್‌ವರೆಗೆ ಎರಡು ವರ್ಷಗಳ ಅವಧಿಗೆ ಹೆಡ್ ಕೋಚ್ ಆಗಿ ನೇಮಕ ಮಾಡಲಾಗಿದೆ.

ನವೆಂಬರ್ 17ರಿಂದ ಆರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಸರಣಿಯಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

‘ಅವರು (ದ್ರಾವಿಡ್) ಭಾರತೀಯ ಕ್ರಿಕೆಟ್‌ನ ಶ್ರೇಷ್ಠರು ಮತ್ತು ಅವರೊಂದಿಗೆ ಕೆಲಸ ಮಾಡುವುದು ಅತ್ಯಂತ ಸಂತೋಷದ ವಿಚಾರ’ಎಂದು ರೋಹಿತ್ ಹೇಳಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

10 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

10 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

10 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

13 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

14 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

14 hours ago