Featured

ದ್ವಿಚಕ್ರ ವಾಹನಗಳಿಗೂ ಬರಲಿದೆ ಏರ್‌ಬ್ಯಾಗ್‌ – ಭಾರತದಲ್ಲಿ ಏರ್‌ಬ್ಯಾಗ್‌ ಪೇಟೆಂಟ್‌ ಪಡೆದ ಹೋಂಡಾ – Vishwanews24

ದ್ವಿಚಕ್ರ ವಾಹನಗಳಿಗೂ ಬರಲಿದೆ ಏರ್‌ಬ್ಯಾಗ್‌ – ಭಾರತದಲ್ಲಿ ಏರ್‌ಬ್ಯಾಗ್‌ ಪೇಟೆಂಟ್‌ ಪಡೆದ ಹೋಂಡಾ

ನವದೆಹಲಿ: ದೇಶದಲ್ಲಿ ಕಾರುಗಳಿಗೆ ಮಾತ್ರವಲ್ಲ, ದ್ವಿಚಕ್ರ ವಾಹನಗಳಲ್ಲೂ ಇನ್ನು ಏರ್‌ಬ್ಯಾಗ್‌ ಇರಲಿದೆ. ಭಾರತದಲ್ಲಿ ಸ್ಕೂಟರ್‌ಗಳಿಗೆ ಏರ್‌ಬ್ಯಾಗ್‌ ವ್ಯವಸ್ಥೆಯ ಪೇಟೆಂಟ್‌ ಅನ್ನು ಹೋಂಡಾ ಕಂಪನಿ ಪಡೆದುಕೊಂಡಿದೆ.

ಇತ್ತೀಚಿಗೆ ಸೀಟ್‌ ಬೆಲ್ಟ್ ಧರಿಸದ ಕಾರಣದಿಂದ ಅಪಘಾತದಲ್ಲಿ ಉದ್ಯಮಿ ಸೈರಸ್ ಮಿಸ್ತ್ರಿ ನಿಧನರಾದ ನಂತರ ದೇಶದಲ್ಲಿ ಏರ್‌ಬ್ಯಾಗ್‌, ಸೀಟ್‌ ಬೆಲ್ಟ್ ಕುರಿತ ಚರ್ಚೆ ಮುನ್ನೆಲೆಗೆ ಬಂದಿದೆ.

ಅಲ್ಲದೇ ಕೇಂದ್ರ ಸರ್ಕಾರ ಕಾರಿನಲ್ಲಿ ಸಂಚರಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಸೀಟ್‌ ಬೆಲ್ಟ್ ಧರಿಸುವ ನಿಯಮ ಜಾರಿಗೆ ಮುಂದಾಗಿದೆ.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ದೇಶದಲ್ಲಿ ದ್ವಿಚಕ್ರ ವಾಹನಗಳ ಅಪಘಾತ ಸಂಖ್ಯೆ ಹೆಚ್ಚಿದೆ. ಅಲ್ಲದೇ ದ್ವಿಚಕ್ರ ವಾಹನಗಳಲ್ಲಿ ಸುರಕ್ಷತೆಯ ಅಂಶಗಳು ತೀರಾ ಕಡಿಮೆ. ಹಾಗಾಗಿ ಸ್ಕೂಟರ್‌ಗಳಿಗೆ ಏರ್‌ಬ್ಯಾಗ್‌ ಅಳವಡಿಸಲು ಹೋಂಡಾ ಕಂಪನಿ ಮುಂದಾಗಿದೆ.

ಕಂಪನಿಯ ಪ್ರಾಥಮಿಕ ವಿನ್ಯಾಸದ ಪ್ರಕಾರ, ಹ್ಯಾಂಡಲ್‌ ಬಾರ್‌ ಇರುವ ಕಡೆಯಲ್ಲಿ ಏರ್‌ಬ್ಯಾಗ್‌ ಅಳವಡಿಸಲಾಗುತ್ತದೆ. ಏರ್‌ಬ್ಯಾಗ್‌ ಪಕ್ಕದಲ್ಲಿ ಇನ್‌ಫ್ಲೇಟರ್‌ ಅಳವಡಿಸಲಾಗುತ್ತದೆ. ಜತೆಗೆ ಅಪಘಾತಗಳನ್ನು ಪತ್ತೆಹಚ್ಚಲು ಹಾಗೂ ಏರ್‌ಬ್ಯಾಗ್‌ ತೆರೆಯುವಂತೆ ಸಂದೇಶ ಕಳುಹಿಸಲು ಸ್ಕೂಟರ್‌ನಲ್ಲಿ ವೇಗವರ್ಧಕಗಳನ್ನು ಬಳಸಲಾಗುತ್ತದೆ. ಈ ವ್ಯವಸ್ಥೆಯ ಅಭಿವೃದ್ಧಿ ಕಾರ್ಯ ಅಂತಿಮ ಘಟ್ಟದಲ್ಲಿದೆ ಎಂದು ಕಂಪನಿ ಮಾಹಿತಿ ನೀಡಿದೆ.

ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ನೇತ್ರತ್ವದಲ್ಲಿ ಹಿಂದಿ ದಿವಸ್ ಆಚರಣೆ ವಿರೋಧಿಸಿ ಕಾಪು ಪೇಟೆಯಲ್ಲಿ ಪ್ರತಿಭಟನೆ..ಪ್ರಾದೇಶಿಕ ಭಾಷೆಗಳಿಗೆ ಒತ್ತು ನೀಡದ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಕೂಗಿ ಪ್ರತಿಭಟಿಸಿದ ಕಾಪು ಜೆಡಿಎಸ್..

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

17 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

18 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

18 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

18 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

18 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago