Featured

ದ್ವಿತಿಯ ಪಿಯುಸಿ ಪರೀಕ್ಷೆ ಆರಂಭ ; ಕೊನೆಕ್ಷಣ ಬಂದು ಹಾಲ್ ಟಿಕೆಟ್ ಪಡೆದ ಹಿಜಾಬ್ ಹೋರಾಟಗಾರ್ತಿಯರು – Vishwanews24

ದ್ವಿತಿಯ ಪಿಯುಸಿ ಪರೀಕ್ಷೆ ಆರಂಭ ; ಕೊನೆಕ್ಷಣ ಬಂದು ಹಾಲ್ ಟಿಕೆಟ್ ಪಡೆದ ಹಿಜಾಬ್ ಹೋರಾಟಗಾರ್ತಿಯರು

ಉಡುಪಿ: ರಾಜ್ಯಾದ್ಯಂತ ಇಂದಿನಿಂದ ದ್ವಿತಿಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆ ಆರಂಭವಾಗಿದ್ದು, ಉಡುಪಿಯ ಹಿಜಬ್‌ ಹೋರಾಟಗಾರ್ತಿಯರಾದ ಆಲಿಯಾ ಅಸಾದಿ ಮತ್ತು ರೇಷಂ ಹಾಲ್‌ ಟಿಕೆಟ್‌ ಪಡೆದಿದ್ದಾರೆ.

ಮಹಿಳಾ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರಾದ ಅಲ್ಮಾಸ್ ಎ ಹೆಚ್, ಹಜ್ರಾ ಶಿಫಾ, ಅಲಿಯಾ ಅಸಾದಿ, ಅಲಿಯಾ ಬಾನು ಮತ್ತು ರೇಷಂ ತರಗತಿಯಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಪ್ರತಿಭಟಿಸಿದ್ದರು. ಆರು ಮಂದಿ ಹಿಜಬ್ ಹೋರಾಟಗಾರ್ತಿಯರ ಪೈಕಿ ಇಬ್ಬರು ಪ್ರಥಮ ಪಿಯುಸಿ ಹಾಗೂ ಇನ್ನುಳಿದ ನಾಲ್ವರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದಾರೆ.

ಇಂದು ದ್ವಿತೀಯ ಪಿಯುಸಿಯ ಕಾಮರ್ಸ್ ವಿಭಾಗದ ಪರೀಕ್ಷೆ ನಡೆದಿದ್ದು, ನಾಲ್ವರ ಪೈಕಿ ಇಬ್ಬರಿಗೆ ಪರೀಕ್ಷೆ ಇತ್ತು. ಇಂದು ಅಲಿಯಾ ಅಸಾದಿ ಮತ್ತು ರೇಷಂ ಪರೀಕ್ಷೆ ಇತ್ತು.ಇಂದು ಬೆಳಗ್ಗೆ ಕೊನೆ ಕ್ಷಣದಲ್ಲಿ ಕಾಲೇಜಿಗೆ ಆಗಮಿಸಿದ ಆಲಿಯಾ, ರೇಷಂ ಹಾಲ್ ಟಿಕೆಟ್ ಪಡೆದಿದ್ದಾರೆ.

ಕಾಮರ್ಸ್ ವಿಭಾಗದ ಪರೀಕ್ಷೆ ಕೇಂದ್ರ ಉಡುಪಿ ವಿದ್ಯೋದಯ ಕಾಲೇಜಿನಲ್ಲಿದೆ. ಕಾಲೇಜಿನ ಒಳಗಡೆ ಪರೀಕ್ಷೆ ಬರೆಯುವಾಗ ಮಾತ್ರ ಹಿಜಬ್ ತೆಗೆಯಲು ಆದೇಶವಿದೆ. ಹೀಗಾಗಿ ಹಲವಾರು ಮುಸ್ಲಿಮ್ ವಿದ್ಯಾರ್ಥಿನಿಯರು ಕೇಂದ್ರಕ್ಕೆ ಬುರ್ಕಾ, ಹಿಜಬ್ ಧರಿಸಿಕೊಂಡು ಆಗಮಿಸಿದ್ದಾರೆ. ಸದ್ಯ ಬಂದಿರುವ ಮಾಹಿತಿ ಪ್ರಕಾರ ಆಲಿಯಾ, ರೇಷಂ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿದ್ದಾರೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

4 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

5 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

6 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

6 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

6 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

6 hours ago