ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮತ್ತು ಮಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಬನಶಂಕರಿ ಶಾಸ್ತ್ರಿನಗರದ 3ನೇ ಕ್ರಾಸ್ನಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ದ್ವಿತೀಯ ಪಿಯುಸಿಯಲ್ಲಿ ಸಾಹಿತಿ ಪಾಸ್ ಆಗಿದ್ದಾಳೆ. ಆದರೆ ಕಡಿಮೆ ಅಂಕ ಬಂದಿದೆ ಎಂದು ಪುತ್ರಿ ಜತೆ ತಾಯಿ ಪದ್ಮಜಾ ವಾಗ್ವಾದ ಮಾಡಿದ್ದಾರೆ. ದ್ವಿತೀಯ ಪಿಯುಸಿಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಮಗಳನ್ನು ತಾಯಿ ಪ್ರಶ್ನೆ ಮಾಡಿದ್ದಾಳೆ. ಈ ವಿಚಾರಕ್ಕೆ ತಾಯಿ ಮತ್ತು ಮಗಳ ನಡುವೆ ನಿತ್ಯ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಸೋಮವಾರ ಇದೇ ವಿಚಾರಕ್ಕೆ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯಗೊಂಡಿದೆ. ತಾಯಿ ಪದ್ಮಜಾಗೆ 4-5 ಕಡೆ ಸಾಹಿತಿ ಚಾಕುವಿನಿಂದ ಇರಿದರೆ, ತಾಯಿ ಕೂಡ ಮಗಳು ಸಾಹಿತಿ ಮೇಲೆ ಪ್ರತಿದಾಳಿ ಮಾಡಿ ಕೊಲೆಯೇ ಮಾಡಿದ್ದಾಳೆ.ಸದ್ಯ ಪದ್ಮಜಾ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…