ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಯಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.
ಜೆಇಇ ಪರೀಕ್ಷೆಯಂದೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ( Karnataka Second PU Exam ) ದಿನಾಂಕ ಘೋಷಣೆಯಿಂದಾಗಿ, ಮತ್ತೆ ಪಿಯು ಬೋರ್ಡ್ ನಿಂದ ವಾರ್ಷಿಕ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ, ತಾತ್ಕಾಲಿಕ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು.
ಇದು ಅಂತಿಮ ವೇಳಾಪಟ್ಟಿಯಾಗಿದ್ದು, ಇನ್ನೂ ಮುಂದೆ ಯಾವುದೇ ಬದಲಾವಣೆಗೆ ಅವಕಾಶವಿರುವುದಿಲ್ಲ ಎಂದು ಪಿಯು ಬೋರ್ಡ್ ತಿಳಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ
ಏಪ್ರಿಲ್ 22ರಂದು ವ್ಯವಹಾರ ಅಧ್ಯಯನ ಪರೀಕ್ಷೆ
ಏಪ್ರಿಲ್ 23ರಂದು ಗಣಿತ ಪರೀಕ್ಷೆ, ಏಪ್ರಿಲ್ 25ರಂದು ಅರ್ಥಶಾಸ್ತ್ರ
ಏಪ್ರಿಲ್ 26ರಂದು ಮನಃಶಾಸ್ತ್ರ, ರಾಸಾಯನ ಶಾಸ್ತ್ರ ಪರೀಕ್ಷೆ
ಏಪ್ರಿಲ್ 27ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ
ಏಪ್ರಿಲ್ 27ರಂದು ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28ರಂದು ಕನ್ನಡ, ಅರೇಬಿಕ್ ಭಾಷಾ ಪರೀಕ್ಷೆ
ಮೇ 2ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
ಮೇ 5ರಂದು ಇಂಗ್ಲಿಷ್ ಭಾಷಾ ಪರೀಕ್ಷೆ
ಮೇ 10ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ
ಮೇ 12ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
ಮೇ 14ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮೇ 17ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ
ಮೇ 18ರಂದು ಹಿಂದಿ ಪರೀಕ್ಷೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…