ದ್ವಿತೀಯ ಪಿಯುಸಿ ಫಲಿತಾಂಶ : ಜೂ.3ನೇ ವಾರದಲ್ಲಿ ಪ್ರಕಟ : ಸಚಿವ ಬಿ.ಸಿ.ನಾಗೇಶ್ – Vishwanews24

Featured, ರಾಜ್ಯ ನ್ಯೂಸ್

ದ್ವಿತೀಯ ಪಿಯುಸಿ ಫಲಿತಾಂಶ :ಜೂ.3ನೇ ವಾರದಲ್ಲಿ ಪ್ರಕಟ : ಸಚಿವ ಬಿ.ಸಿ.ನಾಗೇಶ್ – Vishwanews24

ಬೆಂಗಳೂರು: ಜೂನ್ 3 ನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲು ಗುರಿ ಹೊಂದಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ. ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗುತ್ತದೆ. ಜೂನ್ 15 ಕ್ಕೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ, ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ ಎಂದಿದ್ದಾರೆ.

ಇನ್ನು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು 2022ರ ಏಪ್ರಿಲ್, ಮೇ ತಿಂಗಳಿನಲ್ಲಿ ನಡೆದಿದ್ದು, ಜೂನ್ 3 ನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಕೆನಡಾ ಸಂಸತ್‌ನಲ್ಲಿ ಮೊಳಗಿದ ಕನ್ನಡದ ಕಹಳೆ : ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ – Vishwanews24

Leave a Reply