ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಿಜಾಬ್ ಗೆ ಅವಕಾಶ ಇಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ – Vishwanews24

Featured, ರಾಜ್ಯ ನ್ಯೂಸ್

ದ್ವಿತೀಯ ಪಿಯು ಪರೀಕ್ಷೆ : ಹಿಜಾಬ್ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿನಿಯರ ಮನವಿ

ಹಿಜಾಬ್ ಗೆ ಅವಕಾಶ ಇಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು : ಮಾರ್ಚ್ 9 ರಿಂದ ಪ್ರಾರಂಭವಾಗುವ ದ್ವಿತೀಯ ಪಿಯು ಪರೀಕ್ಷೆಗಳಿಗೆ ಹಿಜಾಬ್ ಧರಿಸಲು ಅನುಮತಿ ಕೋರಿ ವಿದ್ಯಾರ್ಥಿನಿಯರು ಮಾಡಿದ ಮನವಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪಿಯು ಕಾಲೇಜು ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಅಂತಹ ವಿನಂತಿಗಳನ್ನು ಪರಿಗಣಿಸದಂತೆ ಸೂಚನೆಗಳನ್ನು ನೀಡಿದೆ.

ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕಾಲೇಜುಗಳಲ್ಲಿ ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸಲು ಅನುಮತಿ ಕೋರಿದ್ದಾರೆ.

ಉಡುಪಿ: ಟ್ಯಾಕ್ಸಿ, ಆಟೋ ರಿಕ್ಷಾ ಚಾಲಕರ ಮಕ್ಕಳಿಗೆ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ – Vishwanews24

ಈ ವಿಷಯ ಸುಪ್ರೀಂ ಕೋರ್ಟ್ ನಲ್ಲಿರುವುದರಿಂದ ಪರೀಕ್ಷೆ ಸಮಯದಲ್ಲಿ ಹಿಜಾಬ್ ಗೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ, ಈ ಕಾರಣಕ್ಕಾಗಿ ಯಾವುದೇ ವಿದ್ಯಾರ್ಥಿ ಪರೀಕ್ಷೆಗಳನ್ನು ತಪ್ಪಿಸಿಕೊಳ್ಳುತ್ತಾರೆ ಎಂದು ನಾವು ಭಾವಿಸುವುದಿಲ್ಲ. ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

Leave a Reply