Featured

ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ : ಪರೀಕ್ಷಾ ಅವಧಿ 15 ನಿಮಿಷ ಕಡಿತ – vishwanews24

ದ್ವಿತೀಯ ಪಿಯುಸಿ ಪರೀಕ್ಷಾ ಅವಧಿ 15 ನಿಮಿಷ ಕಡಿತ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯು ಅಂತಿಮ ಪರೀಕ್ಷೆಯಲ್ಲಿಇದೀಗ ಮಹತ್ವದ ಬದಲಾವಣೆ ಮಾಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಸಮಯದಲ್ಲಿ 15 ನಿಮಿಷ ಕಡಿತ ಮಾಡಲಾಗಿದೆ.

ಹೊಸ ನಿಯಮ ಅನುಷ್ಠಾನದ ಬಗ್ಗೆ ಮಂಡಳಿ ಸುತ್ತೋಲೆ ಹೊರಡಿಸಿದೆ. ಈ ಮೊದಲು ಮೂರು ಗಂಟೆಗಳ ಕಾಲ ನಡೆಯುತ್ತಿದ್ದ ಲಿಖಿತ ಪರೀಕ್ಷೆ ಇನ್ನು ಮುಂದೆ 2 ಗಂಟೆ 45 ನಿಮಿಷಗಳ ಕಾಲ ನಡೆಯಲಿದೆ.

ಇದೇ ಶೈಕ್ಷಣಿಕ ವರ್ಷದಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಈ ಹಿಂದೆ ಲಿಖಿತ ಪರೀಕ್ಷೆಗೆ 100 ಅಂಕಗಳ ಪ್ರಶ್ನೆಪತ್ರಿಕೆಯನ್ನು ಉತ್ತರಿಸಲು ಪರೀಕ್ಷೆಯಲ್ಲಿ 3 ಗಂಟೆ ಕಾಲಾವಕಾಶ ನೀಡಲಾಗುತ್ತಿತ್ತು. ಈಗ ಗರಿಷ್ಠ 70/80 ಅಂಕಗಳ ಪ್ರಶ್ನೆಪತ್ರಿಕೆಗೆ ಉತ್ತರಿಸಬೇಕಾಗಿರುವುದರಿಂದ ವಿದ್ಯಾರ್ಥಿಗಳು 2.45 ಗಂಟೆಯಲ್ಲಿ ಉತ್ತರ ಬರೆಯಬೇಕಾಗಿದೆ.

ಆದರೆ ಪರೀಕ್ಷೆ ಬರೆಯುವ ವಿದ್ಯಾರ್ಥಿಯು ಪರೀಕ್ಷಾ ಕೊಠಡಿಯಲ್ಲಿ ಮೂರು ಗಂಟೆ ಕಳೆಯಬೇಕಿದೆ. ಯಾಕೆಂದರೆ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಯನ್ನು ಓದಿಕೊಳ್ಳಲು 15 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಬಳಿಕ ಉತ್ತರಿಸಲು 2 ಗಂಟೆ 45 ನಿಮಿಷಗಳ ಕಾಲಾವಕಾಶವನ್ನು ನೀಡಲಾಗುತ್ತದೆ.

ಎನ್.ಎಸ್.ಕ್ಯು.ಎಫ್ ಹಾಗೂ ಹಿಂದೂಸ್ತಾನಿ ಸಂಗೀತ ವಿಷಯಗಳಲ್ಲಿ 60/40 ಅಂಕಗಳ ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸಬೇಕಾದ ಅವಧಿಯನ್ನು ಈ ಹಿಂದಿನಂತೆ 2 ಗಂಟೆ 30 ನಿಮಿಷವನ್ನು ಮುಂದುವರಿಸಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago