ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ – Vishwanews24

Featured, ಉಡುಪಿ, ದಕ್ಷಿಣ ಕನ್ನಡ

ದ್ವಿತೀಯ ಪಿಯು ಫಲಿತಾಂಶ ಪ್ರಕಟ: ದಕ ಪ್ರಥಮ, ಉಡುಪಿ ದ್ವಿತೀಯ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ.

2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

‘ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ’ : ನಿಮ್ಮ ‘ರಿಸಲ್ಟ್’ ಚೆಕ್‌ ಮಾಡಲು ಲಿಂಕ್ ಇಲ್ಲಿದೆ – Vishwanews24

ದಕ್ಷಿಣ ಕನ್ನಡ ಜಿಲ್ಲೆಯ 97.37% ನೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದೆ. ಉಡುಪಿ – 96.80% ನೊಂದಿಗೆ ದ್ವಿತೀಯ, ವಿಜಯಪುರ – 94.89% ನೊಂದಿಗೆ ತೃತೀಯ ಸ್ಥಾನ ಪಡೆದಿದೆ. ಗದಗ ಜಿಲ್ಲೆ 72.86% ನೊಂದಿಗೆ ಕೊನೆ ಸ್ಥಾನದಲ್ಲಿದೆ.

11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

ಶೋಭಾ ಕರಂದ್ಲಾಜೆ ಕಾರು ಅಪಘಾತ ಪ್ರಕರಣ : ಇಬ್ಬರು ಚಾಲಕರ ಮೇಲೆ ಎಫ್‍ಐಆರ್  – Vishwanews24

Leave a Reply