ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಬಾಲಕೀಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್‍ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ನಿರ್ಮಿಸಿದ್ದು ಉಡುಪಿ ಮೊದಲ ಸ್ಥಾನ ಪಡೆದರೆ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನವನ್ನು ಪಡೆದಿದೆ. ಈ ವರ್ಷ ಒಟ್ಟು ಶೇ.61.73 ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 4,14,587 ಮಂದಿ ಪಾಸ್ ಆಗಿದ್ದಾರೆ.
1,86,690 ಬಾಲಕರು, 2,27,897 ಬಾಲಕಿಯರು ತೇರ್ಗಡೆಯಾಗಿದ್ದಾರೆ. 54,823 ಮಂದಿ ಉನ್ನತ ಶ್ರೇಣಿ, 2,27,301 ಮಂದಿ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದಾರೆ.
ಉಡುಪಿ ಶೇ.92.20, ದಕ್ಷಿಣ ಕನ್ನಡ ಶೇ.90.91, ಕೊಡಗು ಶೇ.83.31 ಫಲಿತಾಂಶ ದಾಖಲಿಸುವ ಮೂಲಕ ಅನುಕ್ರಮವಾಗಿ ಮೊದಲ ಮೂರು ಸ್ಥಾನವನ್ನು ಪಡೆದುಕೊಂಡಿದೆ. ಚಿತ್ರದುರ್ಗ ಶೇ.51.42 ಫಲಿತಾಂಶ ದಾಖಲಿಸಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…