ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 12-40ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದ್ದು, ಈ ಬಾರಿಯೂ ನಿರೀಕ್ಷೆಯಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿದ್ದು, ಯಾದಗಿರಿ(ಶೇ.48.45) ಕೊನೆಯ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ(93.57) ದ್ವಿತೀಯ ಸ್ಥಾನ ಗಳಿಸಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.
ಮಾರ್ಚ್ 1ರಿಂದ 20ರವರೆಗೆ ರಾಜ್ಯಾದ್ಯಂತ 1,771 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪಿಯು ಪರೀಕ್ಷೆಗೆ ಒಟ್ಟು 7ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಮರುದಿನದಿಂದಲೇ ರಾಜ್ಯಾದ್ಯಂತ 76 ಕೇಂದ್ರಗಳಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯ ಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು.
ಏಪ್ರಿಲ್ 3ರ ವೇಳೆಗೆ ಮೌಲ್ಯಮಾಪನ ಪೂರ್ಣಗೊಂಡಿತ್ತು. ಇದೀಗ ಫಲಿತಾಂಶದ ಕಂಪ್ಯೂಟರೀಕರಣ ಕಾರ್ಯ ಮುಗಿದಿದ್ದರಿಂದ, ಫಲಿತಾಂಶವನ್ನು ಘೋಷಿಸಿದೆ. ವಿದ್ಯಾರ್ಥಿಗಳು ಅಪರಾಹ್ನ 1-30ಕ್ಕೆ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಬೆಂಗಳೂರು ದಕ್ಷಿಣ 3ನೇ ಸ್ಥಾನ(ಶೇ.85.36), ಕೊಡಗು 4ನೇ ಸ್ಥಾನ (ಶೇ.83.84), ಬೆಂಗಳೂರು ಉತ್ತರ 5ನೇ ಸ್ಥಾನ (ಶೇ.83.31), ಉತ್ತರ ಕನ್ನಡ (ಶೇ.82.93), ಶಿವಮೊಗ್ಗ (ಶೇ.79.91), ಬೆಂಗಳೂರು ಗ್ರಾಮಾಂತರ (ಶೇ.79.70), ಚಿಕ್ಕಮಗಳೂರು (ಶೇ.79.56), ಹಾಸನ (ಶೇ.77.56), ಚಿಕ್ಕಬಳ್ಳಾಪುರ (ಶೇ.75.80), ಮೈಸೂರು (ಶೇ.74.30), ಚಾಮರಾಜನಗರ (ಶೇ.73.97), ಮಂಡ್ಯ (ಶೇ.72.27), ಬಾಗಲಕೋಟೆ (72.83), ಕೋಲಾರ (ಶೇ.72.45), ಧಾರವಾಡ (ಶೇ.72.32), ತುಮಕೂರು (ಶೇ.72.02), ರಾಮನಗರ (ಶೇ.69.71).
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…