Featured

ದ್ವಿಪತ್ನಿತ್ವ ಪದ ಬಳಕೆ: ನನ್ನ ಜೀವನ ತೆರೆದ ಪುಸ್ತಕವಿದ್ದಂತೆ, ನಾನು ಯಾವುದನ್ನು ಕದ್ದು ಮುಚ್ಚಿ ಮಾಡಿಲ್ಲ : ಬಿಜೆಪಿಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ – Vishwanews24

ದ್ವಿಪತ್ನಿತ್ವ ಪದ ಬಳಕೆ: ನನ್ನ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದನ್ನು ಕದ್ದು ಮುಚ್ಚಿ ಮಾಡಿಲ್ಲ : ಬಿಜೆಪಿಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ – Vishwanews24

ವಿಜಯಪುರ: ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಹತ್ತಿರ ಬರುತ್ತಿದ್ದಂತೆ ರಾಜಕೀಯ ನಾಯಕರ ವಾಕ್ಸಮರ, ಆರೋಪ-ಪ್ರತ್ಯಾರೋಪ ತಾರಕಕ್ಕೇರುತ್ತಿದೆ. ರಾಜಕೀಯ ನಾಯಕರು ಟೀಕಿಸುವ ಭರದಲ್ಲಿ ವೈಯಕ್ತಿಕ  ದಾಳಿಗೆ ಇಳಿದಿದ್ದಾರೆ.

ಅದರಲ್ಲೂ ಬಿಜೆಪಿ ಬೈಗಮಿ (ದ್ವಿಪತ್ನಿತ್ವ) ಎನ್ನುವ ಪದ ಬಳಕೆ ಮಾಡಿದೆ. ಇದಕ್ಕೆ ಇದೀಗ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಬಿಜೆಪಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ವಿಜಯಪುರದ ಸಿಂದಗಿಯಲ್ಲಿ ಇಂದು (ಅ.20) ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಬಿಜೆಪಿಯ ಒಬ್ಬೊಬ್ಬ ನಾಯಕರಿಗೂ ಒಂದೊಂದು ಇತಿಹಾಸವಿದೆ. ಅದನ್ನ ನನ್ನ ಬಾಯಲ್ಲಿ ಹೇಳೋಕೆ ಆಗಲ್ಲ. ಅವರ ಬಂಡವಾಳ ಬಿಚ್ಚಿದ್ರೆ ಚರ್ಚೆ ಮಾಡೋಕೆ ಆಗಲ್ಲ. ಅವರ ಈ ಪದಗಳ ಬಳಕೆಗೆ ನಾನು ಹತ್ತರಷ್ಟು ಕೆಸರೆರಚಬಲ್ಲೆ. ಅವರು ಜವಾಬ್ದಾರಿ ಅರಿತು ನಡೆದುಕೊಳ್ಳಲಿ ಎಂದು ಎಚ್ಚರಿಕೆ ನೀಡಿದರು.

ನನ್ನ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದನ್ನು ಕದ್ದು ಮುಚ್ಚಿ ಮಾಡಿಲ್ಲ ಇದೆಲ್ಲ ಅವರಿಗೆ ಅನ್ವಯಿಸುತ್ತೆ. ನಮ್ಮ ಪಕ್ಷದ ಇತ್ತೀಚಿನ ಏಳಿಗೆಯನ್ನ ಸಹಿಸದೇ ಬಿಜೆಪಿಯವ್ರು ವೈಯಕ್ತಿಕ ದಾಳಿಗೆ ಇಳಿದಿದ್ದಾರೆ. ನನ್ನನ್ನು ಡಿಸ್ಟರ್ಬ್​ ಮಾಡೋಕೆ ಅಂತಾನೇ ಈ ರೀತಿ ಮಾಡಿದ್ದಾರೆ. ಆದರೆ ಇವರ ಈ ಹೇಳಿಕೆಗಳಿಂದ ನಾನೇನು ವಿಚಲಿತನಾಗೋದಿಲ್ಲ ಎಂದರು.

ಕುಮಾರಸ್ವಾಮಿ ಆರ್‌ಎಸ್‌ಎಸ್‌  ಹಾಗೂ ಮುಸ್ಲಿಂರ   ಮತಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ಇದಕ್ಕೆ ಬಿಜೆಪಿ ಕುಮಾರಸ್ವಾಮಿ ಅವರ ವೈಯಕ್ತಿಕ ವಿಚಾರಗಳನ್ನೂ ಕೂಡ ಪ್ರಸ್ತಾಪ ಮಾಡುವಂತ ಪ್ರಯತ್ನ ಮಾಡಿದ್ದು, ಸ್ವಜನ ಪಕ್ಷಪಾತ ಇವೆಲ್ಲ ತಪ್ಪುಗಳನ್ನು ಮಾಡಿರುವ ನೀವು ಎಲ್ಲಕ್ಕಿಂತ ಮುಖ್ಯವಾಗಿ  ಬೈಗಮಿ(ದ್ವಿಪತ್ನಿತ್ವ)ಯಲ್ಲವೇ ಎಂದು ಪ್ರಶ್ನೆ ಮಾಡಿ ಟೀಕಿಸಿತ್ತು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

13 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago