ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ದ್ವೇಷ ಭಾಷಣದ ವಿರುದ್ಧ ಕಾನೂನು ತಂದಿರುವುದು ಸಂವಿಧಾನದ ವಿರುದ್ಧವಿದೆ. ನಾವು ಇದನ್ನು ಖಂಡಿಸುತ್ತೇವೆ. ಅಲ್ಲದೇ ಇದರ ವಿರುದ್ಧ ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ವಾಕ್ ಸ್ವಾತಂತ್ರ‍್ಯ, ವ್ಯಕ್ತಿ ಸ್ವಾತಂತ್ರ‍್ಯ ಮೊಟಕುಗೊಳಿಸುವ ಕಾನೂನು. ಈಗಾಗಲೇ ದ್ವೇಷದ ಭಾಷಣ ತಡೆಯಲು ಸಾಕಷ್ಟು ಕಾನೂನುಗಳಿವೆ. ಆ ಕಾನೂನು ಬಳಸಬಹುದು. ಆದರೆ ಹತ್ತು ವರ್ಷದ ಶಿಕ್ಷೆ ಕಾನೂನು ತಂದು ಸರ್ಕಾರದ ವಿರುದ್ಧ, ಅವರ ಪಕ್ಷದ ವಿರುದ್ಧ ಮಾತನಾಡುವವರಿಗೆ ನಾನು ಬೇಲೆಬಲ್ ವಾರೆಂಟ್ ತಂದು ಜೈಲಿಗೆ ಕಳುಹಿಸುವ ಹುನ್ನಾರ ಇದರಲ್ಲಿ ಇದೆ. ಇದು ಪ್ರಜಾಪ್ರಭುತ್ವ ವಿರುದ್ಧ ಎಂದು ಆರೋಪಿಸಿದ್ದಾರೆ.
ಒಂದು ರೀತಿಯಲ್ಲಿ ಕರ್ನಾಟಕದಲ್ಲಿ ತುರ್ತುಪರಿಸ್ಥಿತಿ ಘೋಷಣೆ ಆಗಿದೆ ಅಂತ ಭಾವನೆ ಬರುತ್ತಿದೆ. ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಎಲ್ಲ ರಂಗದಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವ ಸರ್ಕಾರ ದೀನ ದಲಿತರ ಹಣವನ್ನು ಲಪಟಾಯಿಸಿರುವ ಸರ್ಕಾರ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಅದರ ವಿರುದ್ಧ ಯಾರಾದರೂ ಧ್ವನಿ ಎತ್ತಿದರೆ, ಅವರ ಧ್ವನಿಯನ್ನು ದಮನ ಮಾಡುವ ದಮನಕಾರಿ ಕಾನೂನು ತಂದಿದ್ದಾರೆ. ಇದು ಒಂದು ರೀತಿಯಲ್ಲಿ ಸಿದ್ದರಾಮಯ್ಯ ಅವರ ರಾಜಕಾರಣಕ್ಕೆ ಕಪ್ಪು ಚುಕ್ಕೆ. ವ್ಯಕ್ತಿ ಸ್ವಾತಂತ್ರ‍್ಯ ಹಾಗೂ ಸಂವಿಧಾನದ ಬಗ್ಗೆ ಮಾತನಾಡುವ ಸಿಎಂ ಸಿದ್ದರಾಮಯ್ಯ ಅವರು ಅದರ ತದ್ವಿರುದ್ಧವಾಗಿ ನಡೆದುಕೊಂಡಿದ್ದಾರೆ. ನಾವು ಇದನ್ನು ಖಂಡಿಸುತ್ತೇವೆ, ಅಲ್ಲದೇ ಇದರ ವಿರುದ್ಧ ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…