ಬೆಂಗಳೂರು: ರಾಜ್ಯ ಸರ್ಕಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಿ ಅನುಮೋದನೆಗಾಗಿ ಕಳುಹಿಸಿದ್ದ ಒಟ್ಟು 22 ಮಸೂದೆಗಳ ಪೈಕಿ 19ಕ್ಕೆ ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಅಂಕಿತ ಹಾಕಿದ್ದಾರೆ. ಆದರೆ ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದ ಕಾರಣ ಇನ್ನೂ ರಾಜ್ಯಪಾಲರ ಪರಿಶೀಲನೆಯಲ್ಲಿದೆ.
ಎರಡು ಮಸೂದೆಗಳಾದ ಕರ್ನಾಟಕ ಪರಿಶಿಷ್ಟ ಜಾತಿ(SC ಒಳ ಮೀಸಲಾತಿ) ಮಸೂದೆ ಮತ್ತು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕಗಳನ್ನು ಹೆಚ್ಚಿನ ಸ್ಪಷ್ಟೀಕರಣ ಕೋರಿ ರಾಜ್ಯಪಾಲರು ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ ಎಂದು ಲೋಕಭವನ ತಿಳಿಸಿದೆ.
ಇವುಗಳ ಹೊರತಾಗಿ, ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ(ತಡೆಗಟ್ಟುವಿಕೆ) ಮಸೂದೆಯು ರಾಜ್ಯಪಾಲರ ಪರಿಗಣನೆಯಲ್ಲಿದೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್ ಪ್ರಭು ಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
22 ಮಸೂದೆಗಳಲ್ಲಿ 19 ಮಸೂದೆಗಳನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ ಮತ್ತು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲು ಕಳುಹಿಸಲಾಗಿದೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ(ತಡೆಗಟ್ಟುವಿಕೆ) ಮಸೂದೆಗೆ ತೀವ್ರ ವಿರೋಧ ವ್ಯಕ್ತಿಪಡಿಸಿದ್ದ ಪ್ರತಿಪಕ್ಷ ಬಿಜೆಪಿ, ದ್ವೇಷ ಭಾಷಣ ಮಸೂದೆಗೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಮನವಿ ಮಾಡಿತ್ತು.
ದ್ವೇಷ ಭಾಷಣ ಮಸೂದೆ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲು ರಾಜ್ಯಪಾಲರು ಚಿಂತನೆ ಮಾಡಿದ್ದಾರೆ ಎನ್ನಲಾಗಿದೆ. ರಾಷ್ಟ್ರಪತಿಗಳಿಗೂ ದ್ವೇಷ ಭಾಷಣ ಮಸೂದೆ ಕಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಮಸೂದೆಯು 1 ಲಕ್ಷ ರೂಪಾಯಿಗಳವರೆಗೆ ದಂಡ ಮತ್ತು ಏಳು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಲು ಅವಕಾಶ ನೀಡುತ್ತದೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…