Featured

ದ್ವೇಷ ಭಾಷಣ ವಿರೋಧಿ ಮಸೂದೆ ; ಹಿಂದುತ್ವ ಸಂಘಟನೆ, ನಾಯಕರನ್ನು ಮುಗಿಸುವ ಷಡ್ಯಂತ್ರ: ಮುತಾಲಿಕ್ ಆರೋಪ – vishwanews24

ದ್ವೇಷ ಭಾಷಣ ವಿರೋಧಿ ಮಸೂದೆ – ಹಿಂದುತ್ವ ಸಂಘಟನೆ, ನಾಯಕರನ್ನು ಮುಗಿಸುವ ಷಡ್ಯಂತ್ರ: ಮುತಾಲಿಕ್ ಆರೋಪ

ದಾವಣಗೆರೆ: ರಾಜ್ಯ ಸರಕಾರ ದ್ವೇಷ ಭಾಷಣ, ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಕಾಯ್ದೆಯ ಮೂಲಕ ಹಿಂದೂಗಳನ್ನು ಗುರಿಯಾಗಿಸಿ ಹಿಂದುತ್ವ ಸಂಘಟನೆ, ನಾಯಕರನ್ನು ಮುಗಿಸುವ ಷಡ್ಯಂತ್ರ ನಡೆಸಿದೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಮಸೂದೆಯನ್ನು ಶ್ರೀರಾಮಸೇನೆ ಉಗ್ರವಾಗಿ ಖಂಡಿಸುತ್ತದೆ. ಸರಕಾರ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡಿ, ಮುಸ್ಲಿಮರ ಓಟ್ ಗಾಗಿ ಈ ಮಸೂದೆ ಜಾರಿಗೆ ತರಲು ಹೊರಟಿದೆ. ಗೋಹತ್ಯೆ ನಿಷೇಧ ಜಾರಿಯಲ್ಲಿದ್ದಾಗಲೂ ಹಲವೆಡೆ ಗೋಹತ್ಯೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಗೋಹತ್ಯೆ ವಿರುದ್ಧ ಮಾತನಾಡುವುದು ತಪ್ಪೇ?, ಲವ್ ಜಿಹಾದ್, ಪ್ರೀತಿ, ಪ್ರೇಮದ ಹೆಸರಲ್ಲಿ ಮತಾಂತರ ನಡೆದಾಗ ತಡೆಯುವುದು ತಪ್ಪೇ? ಈ ಕುರಿತು ಹಿಂದೂಗಳಲ್ಲಿ ಜಾಗೃತಿ ಮೂಡಿಸುವುದು ತಪ್ಪೇ? ಹಲವೆಡೆ ಅನಧಿಕೃತವಾಗಿ ಚರ್ಚ್, ಮಸೀದಿ ಸ್ಥಾಪನೆ, ಸ್ಮಶಾನ ಜಾಗ ಕಬಳಿಗೆ ನಡೆದಾಗ ವಿರೋಧಿಸುವುದು ತಪ್ಪೇ? ಎಂದು ಪ್ರಶ್ನಿಸಿದರು.

ಪ್ರಶ್ನಿಸುವ, ವಿರೋಧಿಸುವ ಧೈರ್ಯವನ್ನು ಸರಕಾರ ಹತ್ತಿಕ್ಕಿ ಹಿಂದೂಗಳನ್ನು ಸಂಪೂರ್ಣವಾಗಿ ನಾಶ ಮಾಡುವ ಹುನ್ನಾರ ನಡೆಸಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳನ್ನು ಹರಣಗೈದಿದೆ. ಆದ್ದರಿಂದ ಈ ಕೂಡಲೇ ರಾಜ್ಯದ ಬಿಜೆಪಿ, ಜೆಡಿಎಸ್ ಶಾಸಕರು ಸಂಪುಟ ಸಭೆಯಲ್ಲಿ ಈ ಮಸೂದೆ ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸುವ ಮೂಲಕ ಈ ಮಸೂದೆ ಜಾರಿಯಾಗದಂತೆ ನೋಡಿಕೊಳ್ಳಬೇಕು. ಈ ಕುರಿತು ಎಲ್ಲ ಶಾಸಕರಿಗೆ ಒತ್ತಾಯಿಸಿ ಸಂಘಟನೆಯಿಂದ ಮನವಿ ಸಲ್ಲಿಸಿ ಒತ್ತಡ ಹೇರಲಾಗುವುದು ಎಂದು ಮುತಾಲಿಕ್ ಹೇಳಿದರು.

ಇದೇ ಸಂದರ್ಭ ಮುತಾಲಿಕ್ ಕಾಯ್ದೆಯ ಪ್ರತಿಗಳನ್ನು ಹರಿದುಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಶ್ರೀರಾಮ ಸೇನೆಯ ಪ್ರಮುಖರಾದ ಪರಶುರಾಮ್ ನಡುವಿನಮನಿ, ಯಶವಂತ್, ಶ್ರೀಧರ್, ಮಧು ಇತರರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago