ಮಂಜನಾಡಿ: ಗ್ರಾಮದ ಮೊಂಟೆಪದವು ಪಂಬದ ಹಿತ್ತಿಲು ಕೋಡಿ ಕೊಪ್ಪಲ ಎಂಬಲ್ಲಿ ಧಾರಕಾರ ಮಳೆಗೆ ಗುಡ್ಡವೊಂದು ಕುಸಿದು ಮನೆಯೊಂದು ಸಂಪೂರ್ಣ ಕುಸಿದು ಓರ್ವ ಮಹಿಳೆ ಮೃತಪಟ್ಟು , ಇಬ್ಬರು ಗಾಯಗೊಂಡಿದ್ದಾರೆ ಹಾಗೂ ಓರ್ವ ಮಹಿಳೆ ಹಾಗೂ ಇಬ್ಬರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ.
ಮೃತಪಟ್ಟ ಮಹಿಳೆಯನ್ನು ಪ್ರೇಮ(58) ಎಂದು ಗುರುತಿಸಲಾಗಿದೆ. ಅವರ ಪತಿ ಕಾಂತಪ್ಪ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಂತಪ್ಪ ಪೂಜಾರಿ ಅವರ ಪುತ್ರ ಸೀತಾರಾಮ ಅವರು ಅದೃಷ್ಟವಶಾತ್ ಪಾರಾಗಿದ್ದಾರೆ. ಗುಡ್ಡ ಕುಸಿದು ಮನೆಯ ಒಂದು ಭಾಗದಲ್ಲಿ ಮಲಗಿದ್ದ ಸೀತಾರಾಮ ಅವರ ಪತ್ನಿ ಅಶ್ವಿನಿ ಹಾಗೂ ಇಬ್ಬರು ಪುಟ್ಟ ಮಕ್ಕಳು( 3 ಹಾಗೂ 2 ವರ್ಷದ ಮಕ್ಕಳು) ಕುಸಿದ ಮನೆಯೊಳಗೆ ಸಿಲುಕಿಕೊಂಡಿದ್ದಾರೆ.
ಸುಮಾರು ಮುಂಜಾನೆ ನಾಲ್ಕು ಗಂಟೆಗೆ ಸುಮಾರಿಗೆ ಘಟನೆ ನಡೆದಿದ್ದು, ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಆದರೆ ಮನೆಯು ಸಂಪೂರ್ಣ ಕುಸಿದ ಪರಿಣಾಮ ರಕ್ಷಣಾ ಕಾರ್ಯ ಕಷ್ಟವಾಗಿತ್ತು. ಬಳಿಕ ಸ್ಥಳಕ್ಕೆ ಎನ್ ಡಿ ಆರ್ ಎಫ್, ಎಸ್ ಡಿಆರ್ ಪಿ, ಅಗ್ನಿಶಾಮಕ ದಳದ ಸಿಬ್ಬಂದಿಗಳು, ಪೊಲೀಸರು ರಕ್ಷಣಾ ಕಾರ್ಯ ಮುಂದುವರಿಸಿದ್ದು ತಾಯಿ ಹಾಗೂ ಇಬ್ಬರು ಮಕ್ಕಳ ರಕ್ಷಣೆಗೆ ಪಣ ತೊಟ್ಟಿದ್ದಾರೆ. ಮನೆಯೊಳಗೆ ಸಿಲುಕಿರುವ ಮಹಿಳೆಯು ಕೊಂಚ ಮಾತಾಡುತ್ತಿದ್ದು, ಒಂದು ಮಗು ಅಳುವ ಶಬ್ದ ಕೇಳುತಿದ್ದು. ರಕ್ಷಣಾ ಕಾರ್ಯಕ್ಕೆ ಎಲ್ಲರೂ ಸಹಕರಿಸುತಿದ್ದು, ಮಳೆಯಿಂದಾಗಿ ಅಡ್ಡಿಯಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…