ದ.ಕ. / ಉಡುಪಿ : ಕರಾವಳಿ ಭಾಗದಲ್ಲಿ ಮಳೆಯಬ್ಬರ ; ಜು.7 ರಿಂದ ಜು.9 ರವರೆಗೆ ರೆಡ್ ಅಲರ್ಟ್ ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ – Vishwanews24

Featured, ಉಡುಪಿ, ದಕ್ಷಿಣ ಕನ್ನಡ

ದ.ಕ. / ಉಡುಪಿ : ಕರಾವಳಿ ಭಾಗದಲ್ಲಿ ಮಳೆಯಬ್ಬರ ; ಜು.7 ರಿಂದ ಜು.9 ರವರೆಗೆ ರೆಡ್ ಅಲರ್ಟ್ ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ 

ದ.ಕ. / ಉಡುಪಿ : ಕರಾವಳಿ ಭಾಗದಲ್ಲಿ ಮಳೆಯಬ್ಬರ ಮುಂದುವರಿದಿದ್ದು ಜು.7 ರಿಂದ ಜು.9 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜು.10ಮತ್ತು11 ರಂದು ಅರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮಂಗಳೂರಿನಿಂದ ಕಾರವಾರ ಸಮುದ್ರದವರೆಗೆ ಭಾರಿ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನದಿ ಹಾಗೂ ಸಮುದ್ರಕ್ಕೆ ಇಳಿಯದಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ರಾಷ್ಟ್ರಿಯ ವಿಪತ್ತು ನಿರ್ವಹಣ ದಳದ 60 ಮಂದಿಯ ತಂಡ ಮತ್ತು ರಾಜ್ಯ ವಿಪತ್ತು ನಿರ್ವಹಣ ದಳ (ಡಿಆರ್ ಎಫ್ ನ ) 67 ಮಂದಿಯ ತಂಡ ಸಂಭಾವ್ಯ ಪ್ರಾಕೃತಿಕ ವಿಕೋಪಗಳನ್ನು ನಿರ್ವಹಿಸಲು ಸನ್ನದ್ಧ ಸ್ಥಿತಿಯಲ್ಲಿದೆ.

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಅಭ್ಯರ್ಥಿಗಳಿಗೆ ಶುಭ ಕೋರಿದ ಪ್ರಧಾನಿ -Vishwanews24

Leave a Reply