Featured

ದ.ಕ. / ಉಡುಪಿ : ಕರಾವಳಿ ಭಾಗದಲ್ಲಿ ಮಳೆಯಬ್ಬರ ; ಜು.7 ರಿಂದ ಜು.9 ರವರೆಗೆ ರೆಡ್ ಅಲರ್ಟ್ ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ – Vishwanews24

ದ.ಕ. / ಉಡುಪಿ : ಕರಾವಳಿ ಭಾಗದಲ್ಲಿ ಮಳೆಯಬ್ಬರ ; ಜು.7 ರಿಂದ ಜು.9 ರವರೆಗೆ ರೆಡ್ ಅಲರ್ಟ್ ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ದ.ಕ. / ಉಡುಪಿ : ಕರಾವಳಿ ಭಾಗದಲ್ಲಿ ಮಳೆಯಬ್ಬರ ಮುಂದುವರಿದಿದ್ದು ಜು.7 ರಿಂದ ಜು.9 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆ ಮುಂದುವರಿಯಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಮೂರು ಜಿಲ್ಲೆಯಲ್ಲಿ 204 ಮಿ.ಮೀ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಜು.10ಮತ್ತು11 ರಂದು ಅರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮಂಗಳೂರಿನಿಂದ ಕಾರವಾರ ಸಮುದ್ರದವರೆಗೆ ಭಾರಿ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನದಿ ಹಾಗೂ ಸಮುದ್ರಕ್ಕೆ ಇಳಿಯದಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ರಾಷ್ಟ್ರಿಯ ವಿಪತ್ತು ನಿರ್ವಹಣ ದಳದ 60 ಮಂದಿಯ ತಂಡ ಮತ್ತು ರಾಜ್ಯ ವಿಪತ್ತು ನಿರ್ವಹಣ ದಳ (ಡಿಆರ್ ಎಫ್ ನ ) 67 ಮಂದಿಯ ತಂಡ ಸಂಭಾವ್ಯ ಪ್ರಾಕೃತಿಕ ವಿಕೋಪಗಳನ್ನು ನಿರ್ವಹಿಸಲು ಸನ್ನದ್ಧ ಸ್ಥಿತಿಯಲ್ಲಿದೆ.

Vishwa News 24

Recent Posts

ರೈಲ್ವೇ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು, ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್​ – vishwanews24

ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…

9 hours ago

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ : ಪ್ರಸಾದ್ ರಾಜ್ ಕಾಂಚನ್ – vishwanews24

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…

9 hours ago

ಪಡುಬಿದ್ರಿ : ಬೈಕ್ ಕಳವು ಪ್ರಕರಣ ; ಓರ್ವನ  ಬಂಧನ – vishwanews24

ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ  ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…

9 hours ago

ಉಡುಪಿ: ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು – vishwanews24

ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…

9 hours ago

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ – vishwanews24

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…

10 hours ago

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ – vishwanews24

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…

11 hours ago