ಕಳೆದ ಕೆಲ ದಿನಗಳಿಂದ ದಕ್ಷಿಣ ಕನ್ನಡ ಮತ್ತು ಉಡುಪಿಯ ಹಲವು ಕಡೆ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದ್ದು, ‘ಸಾಗರ್’ ಚಂಡಮಾರುತದ ಪ್ರಭಾವದಿಂದ ಕರ್ನಾಟಕ ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ತೀವ್ರಗೊಳ್ಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಸೇರಿ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚಂಡಮಾರುತದ ಪ್ರಭಾವದಿಂದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು, ಬಿರುಸಾದ ಗಾಳಿ ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಮೀನುಗಾರರಿಗೆ ಸೂಚನೆ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ಮಾರ್ಪಟ್ಟಿದೆ. ‘ಸಾಗರ್’ ಚಂಡಮಾರುತವು ಕೊಲ್ಲಿ ರಾಷ್ಟ್ರಗಳತ್ತ ಚಲಿಸಲಿದೆ. ಚಂಡ ಮಾರುತದ ಪರಿಣಾಮ ಸಮುದ್ರದಲ್ಲಿ ಭಾರಿ ಅಲೆಗಳು ಏಳುವ ಸಾಧ್ಯತೆಗಳಿವೆ. ಈ ನಡುವೆ ಅರಬ್ಬಿ ಸಮುದ್ರದಲ್ಲಿ ಮತ್ತೊಂದು ವಾಯಭಾರ ಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಈ ಬಗ್ಗೆ ಎರಡು ದಿನಗಳಲ್ಲಿ ಸರಿಯಾದ ಚಿತ್ರಣ ಲಭ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ 48 ಗಂಟೆ ಅವಧಿ ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮೀನುಗಾರರಿಗೆ ಸೂಚನೆ ನೀಡಿದೆ.
ಮುನ್ನೆಚ್ಚರಿಕೆ ಕ್ರಮ ಸೂಚನೆ: ರಾಜ್ಯದಲ್ಲಿ ಚಂಡಮಾರುತದ ಪ್ರಭಾವದಿಂದ ಮಳೆಯಾಗಬಹುದು, ಆದರೆ ಚಂಡಮಾರುತದ ಭೀತಿ ಇಲ್ಲ ಎಂದು ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದಲ್ಲಿ ಕರ್ನಾಟಕ ಕರಾವಳಿಯಿಂದ ಸುಮಾರು 400 ಕಿಮೀ. ದೂರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಚಂಡಮಾರುತದಿಂದ ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಕರಾವಳಿಗೆ ಯಾವುದೇ ಸಮಸ್ಯೆ ಇಲ್ಲ. ತಮಿಳುನಾಡು, ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ ಮತ್ತು ಲಕ್ಷದ್ವೀಪ ದ್ವೀಪಸಮೂಹಗಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಕುರಿತು ಇಲಾಖೆ ಎಚ್ಚರಿಕೆ ನೀಡಿದೆ. ಪರಿಸ್ಥಿತಿಯ ಮೇಲೆ ತೀವ್ರ ನಿಗಾ ಇಡಬೇಕು ಹಾಗೂ ಸಕಾಲದಲ್ಲಿ ಸೂಕ್ತ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದೆ.
29ರಂದು ಮುಂಗಾರು ಪ್ರವೇಶ: ಸಾಮಾನ್ಯ ಅವಧಿಗಿಂತ ಈ ಬಾರಿ ಮೂರು ದಿನ ಮೊದಲೇ ಕೇರಳ ಕರಾವಳಿ ಮೂಲಕ ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 20ರ ಆಸುಪಾಸು ಅಂಡಮಾನ್ ಹಾಗೂ ಮೇ 23ರ ಆಸುಪಾಸು ಬಂಗಾಳ ಕೊಲ್ಲಿ ಭಾಗದಲ್ಲಿ ಕಾಣಿಸಿಕೊಳ್ಳಬಹುದು. ಈ ಬಾರಿ ಕೃಷಿ ಚಟುವಟಿಕೆಗೆ ಪೂರಕವಾಗಿ ಉತ್ತಮ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಕಾಪು ಬೀಚ್ನಲ್ಲಿ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ.. ಉಡುಪಿ: ಕಾಪು ಬೀಚ್ನಲ್ಲಿ…
ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…
ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…
ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…
ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್ಪ್ರೆಸ್ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…
ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…