Featured

ದ.ಕ. , ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರ್ಕಾರದಿಂದ ಮಾಸ್ಟರ್ ಪ್ಲಾನ್ : ಶಾಸಕ ಮಂಜುನಾಥ ಭಂಡಾರಿ ಮನವಿಗೆ ಸಚಿವರ ಸ್ಪಂದನೆ – vishwanews24

ದ.ಕ. , ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸರ್ಕಾರದಿಂದ ಮಾಸ್ಟರ್ ಪ್ಲಾನ್ : ಶಾಸಕ ಮಂಜುನಾಥ ಭಂಡಾರಿ ಮನವಿಗೆ ಸಚಿವರ ಸ್ಪಂದನೆ

ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಮಂಜುನಾಥ ಭಂಡಾರಿಯವರು ಪಶ್ಚಿಮ ಘಟ್ಟದಿಂದ ಹರಿಯುವ ನದಿಗಳು, ಜಲಪಾತಗಳು, ಕಡಲ ತೀರಗಳು ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಈ ಪ್ರದೇಶವನ್ನು “ಟೂರಿಸಂ ಹಬ್” ಆಗಿ ರೂಪಿಸಲು ಮಾಸ್ಟರ್ ಪ್ಲಾನ್ ತಯಾರಿಸುವ ಕುರಿತಂತೆ ಸರ್ಕಾರದ ಗಮನಕ್ಕೆ ತಂದಿದ್ದು ಸರ್ಕಾರವು ಈ ಕುರಿತು ನೀಡಿರುವ ಭರವಸೆಯ ಹಿನ್ನೆಲೆಯಲ್ಲಿ ಇಂದು ನಡೆದ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಯಿತು.

ಈ ಕುರಿತು ಶೀಘ್ರವೇ ಎರಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಸಭೆ ಕರೆಯಲಾಗುವುದು. ಜಿಲ್ಲೆಗಳಲ್ಲಿ ಸಭೆ ನಡೆಸಲು ಜಿಲ್ಲಾಧಿಕಾರಿಗಳೇ ಮುಖ್ಯಸ್ಥರಾಗಿರುವುದರಿಂದ ಅವರ ಮೂಲಕ ಸಭೆ ಕರೆದು ಅದಕ್ಕೆ ಸದಸ್ಯರನ್ನು ಆಹ್ವಾನಿಸಿ, ಪ್ರವಾಸೋದ್ಯಮ ಚಟುವಟಿಕೆ ಗಳಿಗಾಗಿ ಅನುದಾನವನ್ನು ವಿನಿಯೋಗಿಸುವ ಬಗ್ಗೆ ಯೋಜನೆ ಮಾಡಲಾಗುವುದು ಮತ್ತು “ರಿವರ್ ಫೆಸ್ಮವಲ್” ಬಗ್ಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಜೀವಿಶಾಸ್ತ್ರ ಸಚಿವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್ ಪ್ರವಾಸೋದ್ಯಮ ಕಾರ್ಯಪಡೆಯನ್ನು ರಚಿಸುವ ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತ್ರತ ಯೋಜನೆಯನ್ನು ತಯಾರಿಸಲು ಸರ್ಕಾರದ ಆದೇಶ ಸಂಖ್ಯೆ: ಟಿಓಆರ್/154/ಟಿಡಿಪಿ/2023, ಬೆಂಗಳೂರು 21.08.2024ರಂದು ಅನುಮೋದನೆಯನ್ನು ನೀಡಿರುತ್ತದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ರಸ್ತೆ ಬದಿ ಸೌಲಭ್ಯಗಳನ್ನು ಉನ್ನತೀಕರಿಸುವ ಮೂಲಕ ಶೈಕ್ಷಣಿಕ, ಆರೋಗ್ಯ, ಸಾಹಸ, ಪರಿಸರ, ಜಲಸಾರಿಗೆ ಹಾಗೂ ಕಡಲ ತೀರದ ಪ್ರವಾಸೋದ್ಯಮಗಳಿಗೆ ಲಭ್ಯವಿರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಲಾಗುವುದು ಎಂದು ಘೋಷಿಸಲಾಗಿದೆ. ಸರ್ಕಾರದ ಆದೇಶ ಸಂಖ್ಯೆ ಟಿಒಆರ್ 56 ಟಿಡಿಪಿ 2025, 23-07-2025 ಘೋಷಣೆಯನ್ನು ಅನುಷ್ಠಾನಗೊಳಿಸುವ ಪ್ರಸ್ತಾವನೆಗೆ ತಾತ್ವಿಕ ಅನುಮೋದನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಣ್ಣೀರುಬಾವಿ ಕಡಲ ತೀರದಲ್ಲಿ ರೆಸಾರ್ಟ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸಲು ಸಮಾಲೋಚಕ ಸಂಸ್ಥೆಯನ್ನು ಆಯ್ಕೆ ಮಾಡಲು ಟೆಂಡರ್ ಪ್ರಕಟಿಸಲಾಗಿದ್ದು, ಸದರಿ ಟೆಂಡರ್ ನ ತಾಂತ್ರಿಕ ಬಿಡ್ಡನ್ನು ದಿನಾಂಕ 07.08.2025 ರಂದು ತೆರೆಯಲಾಗಿದ್ದು, ಸದರಿ ಟೆಂಡರ್ ನಲ್ಲಿ 3 ಬಿಡ್ಡುದಾರರು ಭಾಗವಹಿಸಿದ್ದು ಸದರಿ ಬಿಡ್ಡುದಾರರಿಗೆ ತಾಂತ್ರಿಕ ಪ್ರಾತ್ಯಕ್ಷಿಕೆ 29.08.2025 ರಂದು ಆಯೋಜಿಸಿದ್ದು. ಸದರಿ ಬಿಡ್ ಪರಿಶೀಲನಾ ಹಂತದಲ್ಲಿರುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕೋಡಿಕಲ್, ಗುರುಪುರ ನದಿ ತೀರದಲ್ಲಿ ರೆಸಾರ್ಟ್‌ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ವಹಿವಾಟು Jedmoony, Cai, Jine Infrastructure Development Ports and inland Water Transport Department Government of karnataka (IDP & IWTD) ರವರೊಂದಿಗೆ ಏಂಪ್ಯಾನಲ್ ಆಗಿರುವ ಸಂಸ್ಥೆಗಳಿಗೆ ಮಾತ್ರ ಟೆಂಡರ್ ಪ್ರಕಟಿಸಿದ್ದು, ಸದರಿ ಟೆಂಡರ್ ನ Pre-Bid ಸಭೆಯಲ್ಲಿ ಏಂಪ್ಯಾನಲ್ಡ್ ಬಿಡ್ಡುದಾರರಿಗೆ ಪ್ರಕಟಿಸಿರುವ ಟೆಂಡರ್ ಬದಲಿಗೆ ಒಪನ್ ಟೆಂಡರ್ ಅನ್ನು ಪ್ರಕಟಿಸಿರುವಂತೆ ಬಿಡ್ಡುದಾರ ಸಂಸ್ಥೆಗಳು ಕೋರಿರುತ್ತಾರೆ. ಆದ್ದರಿಂದ ಸದರಿ ಟೆಂಡರ್ ಅನ್ನು ರದ್ದುಪಡಿಸಿದ್ದು, ಮತ್ತೊಮ್ಮೆ ಅತ್ಯಂತ ಜರೂರಾಗಿ ಟೆಂಡರ್ (Open Tender) ಅನ್ನು ಮರುಪ್ರಕಟಿಸಲಾಗಿದ್ದು, ಸದರಿ ಟೆಂಡರ್‌ನ ತಾಂತ್ರಿಕ ಬಿಡ್ಡನ್ನು 12.09.2025 ರಂದು ತೆರೆಯಲಾಗುವುದು.

ಉಡುಪಿ ಜಿಲ್ಲೆಯ ಸದರಿ ಮೂರು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಸಂಬಂಧಿಸಿದಂತೆ ವಹಿವಾಟು ಸಲಹೆಗಾರರನ್ನು ಆಯ್ಕೆ ಮಾಡಿಕೊಳ್ಳಲು Infrastructure Development Ports and inland Water Transport Department Government of karnataka (IDP & IWTD) ಎಂಪ್ಯಾನಲ್ ಆಗಿರುವ ಸಂಸ್ಥೆಗಳಿಗೆ ಮಾತ್ರ ಟೆಂಡರ್ ಪ್ರಕಟಿಸಿದ್ದು, ಸದರಿ ಟೆಂಡರ್ Pre-Bid ಸಭೆಯಲ್ಲಿ ಏಂಪ್ಯಾನಲ್ ಬಿಡ್ಡುದಾರರಿಗೆ ಪ್ರಕಟಿಸಿರುವ ಟೆಂಡರ್ ಬದಲಿಗೆ ಒಪನ್ ಟೆಂಡರ್ ಅನ್ನು ಪ್ರಕಟಿಸಿರುವಂತೆ ಬಿಡುದಾರ ಸಂಸ್ಥೆಗಳು ಕೋರಿರುತ್ತಾರೆ. ಆದ್ದರಿಂದ ಸದರಿ ಟೆಂಡರ್ ಅನ್ನು ರದ್ದುಪಡಿಸಿದ್ದು, ಮತ್ತೊಮ್ಮೆ ಅತ್ಯಂತ ಜರೂರಾಗಿ ಟೆಂಡರ್ (Open Tender) ಅನ್ನು ಮರುಪ್ರಕಟಿಸಲಾಗಿದ್ದು, ಸದರಿ ಟೆಂಡರ್ ತಾಂತ್ರಿಕ ಬಿಡ್ಡನ್ನು 12.09.2025 ರಂದು ತೆರೆಯಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಸಚಿವರು ತಿಳಿಸಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago