ಮಂಗಳೂರು/ಉಡುಪಿ: ಕೋವಿಡ್ ಪ್ರಕರಣಗಳ ಸಂಖ್ಯೆ ಹಾಗೂ ರೂಪಾಂತರಿತ ವೈರಸ್ ಒಮಿಕ್ರಾನ್ ಆತಂಕದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಡಿ.28 ರಿಂದ ಜ.7 ರವರೆಗೆ ಘೋಷಿಸಿರುವ ರಾತ್ರಿ ಕರ್ಫ್ಯೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಯಲಿರುತ್ತದೆ ಎಂದು ಮಂಗಳೂರು ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ ಮತ್ತು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು ತಿಳಿಸಿದ್ದಾರೆ.
ಕರ್ಫ್ಯೂ ಹಿನ್ನಲೆಯಲ್ಲಿ ವಿಧಿಸಿರುವ ನಿರ್ಬಂಧಗಳನ್ನು ಉಭಯ ಜಿಲ್ಲೆಗಳಲ್ಲಿ ಯಥಾವತ್ತಾಗಿ ಜಾರಿಯಲ್ಲಿರುತ್ತದೆ. ಸರ್ಕಾರದ ಆದೇಶದಂತೆ ರಾತ್ರಿ ಕರ್ಪ್ಯೂ ಅವಧಿಯಲ್ಲಿ ಯಾವುದೇ ಸಮಾರಂಭ, ಕಾರ್ಯಕ್ರಮಗಳಿಗೆ ಅವಕಾಶಗಳು ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
2020ರ ಮಾರ್ಚ್‌ನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಲಾಕ್‌ಡೌನ್ ಜಾರಿಗೊಳಿಸಲಾಗಿತ್ತು. ಆಗ ಲಾಕ್‌ಡೌನ್ ಸಡಿಲಿಕೆ ಸಮಯದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಅಂದಿನಿಂದ 2021ರ ನವೆಂಬರ್ ಮೊದಲ ವಾರದವರೆಗೂ ಬಹುತೇಕ ದಿನಗಳಲ್ಲಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಆದೇಶ ಜಾರಿಯಲ್ಲಿತ್ತು. ಒಂದೂವರೆ ತಿಂಗಳಲ್ಲೇ ಮತ್ತೆ ರಾತ್ರಿ ಕರ್ಫ್ಯೂ ಆದೇಶ ಜಾರಿಗೆ ಬಂದಂತಾಗಿದೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…