ಮಂಗಳೂರು : ದ.ಕ. ಜಿಲ್ಲೆಯಲ್ಲಿ ಜುಲೈ 1ರಿಂದ ಸಿಟಿ ಮತ್ತು ಸರ್ವಿಸ್ ಬಸ್‌ಗಳು ಸಂಚಾರ ಆರಂಭಿಸಲಿದೆ ಎಂದು ಕೆನರಾ ಬಸ್ ಮಾಲಕರ ಅಸೋಸಿಯೇಶನ್ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮತ್ತು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ.
‘ಸರಕಾರದ ಮಾರ್ಗಸೂಚಿಯನ್ನು ಯಥಾವತ್ತಾಗಿ ಪಾಲಿಸಲು ಸಾಧ್ಯವಿಲ್ಲ. ಬಸ್ಸಿನಲ್ಲಿರುವ ಸೀಟಿನ ಅರ್ಧದಷ್ಟು ಪ್ರಯಾಣಿಕರನ್ನು ಕರೆದುಕೊಂಡು ಹೋದರೆ ನಮಗೆ ಯಾವುದೇ ಆದಾಯ ಲಭಿಸದು. ಈಗಾಗಲೆ ಡೀಸೆಲ್ ಬೆಲೆ ಏರಿಕೆಯಾಗಿದೆ. ಪ್ರಯಾಣ ದರ ಹೆಚ್ಚಿಸುವಂತೆ ಕೇಳುವುದು ಕೂಡ ಸದ್ಯದ ಸ್ಥಿತಿಯಲ್ಲಿ ಸಮಂಜಸವಲ್ಲ. ನಾವು ಕೆಲವು ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದ್ದೆವು. ಅದನ್ನು ಈಡೇರಿಸಿಲ್ಲ. ಆದಾಗ್ಯೂ ಜು.1ರಿಂದ ಪರಿಸ್ಥಿತಿಯನ್ನು ಗಮನಿಸಿ ಬಸ್‌ಗಳನ್ನು ರಸ್ತೆಗೆ ಇಳಿಸಲಿದ್ದೇವೆ’ ಎಂದು ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ.
’ಸರಕಾರ ನಮ್ಮ ಯಾವ ಬೇಡಿಕೆಯನ್ನೂ ಈಡೇರಿಸಿಲ್ಲ. ಆದಾಗ್ಯೂ ಬಸ್ ಸಾರಿಗೆ ಉದ್ಯಮದ ಭವಿಷ್ಯದ ಹಿತದೃಷ್ಟಿಯಿಂದ ಜುಲೈ 1ರಿಂದ ಬಸ್ ಸಂಚಾರ ಆರಂಭಿಸಲು ಮುಂದಾಗಿದ್ದೇವೆ. ಈಗಾಗಲೆ ಬಸ್ ಚಾಲಕರು, ನಿರ್ವಾಹಕರು ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ಮಾಲಕರು ಕೂಡ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ (ಇಂದು) ಗುರುವಾರ ವಿಸ್ತೃತ ಚರ್ಚೆ ನಡೆಸಿ ಬಸ್ ಸಂಚಾರದ ಬಗ್ಗೆ ನಿರ್ಧರಿಸಿದ್ದೇವೆ ಎಂದು ರಾಜವರ್ಮ ಬಲ್ಲಾಳ್ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…