Featured

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ

ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆ ಮಂಗಳೂರಿನ ಜಿಲ್ಲಾ ಯುವ ಜನತಾದಳ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಮಾತನಾಡಿದ ಅಕ್ಷಿತ್ ಸುವರ್ಣ ಅವರು, ಪಕ್ಷ ಸಂಘಟನೆಯ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯುವಕರನ್ನು ಸಂಘಟಿಸುವ ಮೂಲಕ ಗ್ರಾಮ ಹಾಗೂ ನಗರ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು ಎಂದರು.

ಇದನ್ನೂ ಓದಿ:

ಮುಂಬರುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಲ್ಲಿ ಯುವಕರ ಪಾತ್ರ ಮಹತ್ವದ್ದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸದಸ್ಯತ್ವ ಅಭಿಯಾನ, ಸಭೆಗಳು ಹಾಗೂ ಸಂಘಟನೆ ವಿಸ್ತರಣಾ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಯುವಕರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಯುವ ಜನತಾದಳದಿಂದ ಶೀಘ್ರದಲ್ಲೇ ಜಿಲ್ಲಾ ಮಟ್ಟದ ಭವ್ಯ ಸಮಾವೇಶವನ್ನು ಆಯೋಜಿಸುವ ನಿರ್ಧಾರ ಕೈಗೊಳ್ಳಲಾಯಿತು. ಸಮಾವೇಶದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ಪಕ್ಷದತ್ತ ಸೆಳೆಯುವುದು ಹಾಗೂ ಪಕ್ಷದ ತತ್ವಗಳನ್ನು ಜನರಿಗೆ ತಲುಪಿಸುವುದು ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಸಭೆಯ ಅಂತ್ಯದಲ್ಲಿ ಎಲ್ಲ ಪದಾಧಿಕಾರಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಲಾಗಿದ್ದು, ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸಲು ಸಮನ್ವಯದಿಂದ ಕೆಲಸ ಮಾಡುವ ನಿರ್ಧಾರ ಕೈಗೊಳ್ಳಲಾಯಿತು.

ಇದನ್ನೂ ಓದಿ:

ಸಭೆಯನ್ನು ಜಿಲ್ಲಾ ಯುವ ಮಹಾಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಚಿಮ್ಟಿಕಲ್ಲು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ಹಾಗೂ ಜಿಲ್ಲಾ ಸಂಘಟನಾ ಉಸ್ತುವಾರಿ ರತೀಶ್ ಕರ್ಕೆರ ವಂದಿಸಿದರು.

ಸಭೆಯಲ್ಲಿ ಮತ್ತೊಂದು ಮಹತ್ವದ ನಿರ್ಧಾರವಾಗಿ ಸುಳ್ಯ ತಾಲೂಕು ನಗರ ಯುವ ಅಧ್ಯಕ್ಷರಾಗಿ ರಾಕೇಶ್ ಕೆ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರು ರಾಕೇಶ್ ಕೆ ಅವರಿಗೆ ಆದೇಶ ಪತ್ರ ಹಸ್ತಾಂತರಿಸಿ ಅಭಿನಂದಿಸಿದರು. ಹೊಸದಾಗಿ ನೇಮಕಗೊಂಡ ರಾಕೇಶ್ ಕೆ ಅವರು ಪಕ್ಷ ಸಂಘಟನೆ ಬಲಪಡಿಸಲು ಸಮರ್ಪಕವಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು

ಈ ವೇಳೆ ಜಿಲ್ಲಾ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು, ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಿವ ಸಾಲ್ಯಾನ್, ಕಡಬ ತಾಲೂಕು ಯುವ ಅಧ್ಯಕ್ಷ ಹರಿಪ್ರಸಾದ್, ಮಂಗಳೂರು ದಕ್ಷಿಣ ಕ್ಷೇತ್ರ ಯುವ ಮಹಾಪ್ರಧಾನ ಕಾರ್ಯದರ್ಶಿ ಸುಮಿತ್ ಸುವರ್ಣ, ಹಾಗು ಯುವ ಪಧಾದಿಕಾರಿಗಳಾದ ರಾಕೇಶ್ ಕೆ ಸುಳ್ಯ, ಭರತ, ಆದರ್ಶ ಪೂಜಾರಿ,ರಿನಿತ್ ಪೂಜಾರಿ ,ನಿಶಾಂತ್,ಸುಶಾಂತ್,ಪ್ರಣಾಮ್,ವಿನಿತ್ ಪೂಜಾರಿ, ಅಖಿಲ್, ರಾಜೇಶ್, ಅಭಿಷೇಕ್, ಪ್ರದೀಪ್, ದೀಪಕ್,ವಿಖ್ಯಾತ್ ಕಾರ್ತಿಕ್, ಪ್ರೀತಮ್ ಪೂಜಾರಿ,ತನ್ವಿತ್, ಲಿಖಿತ್ ಸೇರಿದಂತೆ ಹಲವು ಯುವ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:

Vishwa News 24

Recent Posts

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

8 minutes ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 hour ago

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

2 hours ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

3 hours ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

24 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

24 hours ago