Featured

ದ.ಕ. ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದರೂ ಕಾಂಗ್ರೆಸ್ ಮತ್ತೆ ಫೀನಿಕ್ಸ್ ನಂತೆ ಎದ್ದು ಬರುವ ವಿಶ್ವಾಸ ನಮಗಿದೆ : ರಮಾನಾಥ ರೈ  – Vishwanews24

ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶವು ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಲಿದೆ..

ಈ ಹಿಂದೆಯೂ ಅವಿಭಜಿತ ದ.ಕ. ಜಿಲ್ಲೆಯ ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಬಲಿಷ್ಠ ಪಕ್ಷವಾಗಿ ಹೊರಹೊಮ್ಮಿರುವ ಇತಿಹಾಸವಿದೆ..

ಬಡವರಿಗೆ ಅಗತ್ಯವಾದ ಕಾರ್ಯಕ್ರಮ ಜಾರಿಗೊಳಿಸುವಲ್ಲಿ ಕಾಂಗ್ರೆಸ್ನ ಇತಿಹಾಸ ಬಲಿಷ್ಠವಾಗಿದೆ..

ಮಂಗಳೂರು: ಕಳೆದ ಹಲವು ವರ್ಷಗಳಿಂದ ಲೋಕಸಭಾ ಚುನಾವಣೆಯಲ್ಲಿ ಅವಿಭಜಿತ ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಆದರೆ ಕಾಂಗ್ರೆಸ್ ಮತ್ತೆ ಫೀನಿಕ್ಸ್ ನಂತೆ ಎದ್ದು ಬರುವ ವಿಶ್ವಾಸ ನಮಗಿದೆ. ಅದಕ್ಕೆ ಪೂರಕವಾಗಿ ಅಡ್ಯಾರ್ ನಲ್ಲಿ ನಡೆಯುವ ರಾಜ್ಯಮಟ್ಟದ ಸಮಾವೇಶಕ್ಕೆ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.17ರಂದು ಅಡ್ಯಾರ್ ನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಾಂಗ್ರೆಸ್ ಸಮಾವೇಶವು ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬಲಿದೆ ಎಂದರು.

ಈ ಹಿಂದೆಯೂ ಅವಿಭಜಿತ ದ.ಕ. ಜಿಲ್ಲೆಯು ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಬಲಿಷ್ಠ ಪಕ್ಷವಾಗಿ ಹೊರಹೊಮ್ಮಿರುವ ಇತಿಹಾಸವಿದೆ. ಕಾಂಗ್ರೆಸ್ ಜತೆ ಜನತೆ ಕೈಜೋಡಿಸಿದ್ದರು. ಆದರೆ ಸಂಘ ಪರಿವಾರದ ಮತೀಯವಾದಿಗಳ ಪ್ರಯೋಗಶಾಲೆಯಾಗಿ ಜಿಲ್ಲೆ ಮಾರ್ಪಟ್ಟ ನಂತರ ಪಕ್ಷಕ್ಕೆ ಹಿನ್ನಡೆಯಾಗಿದೆ. ಮುಂದಿನ ಚುನಾವಣೆಯಲ್ಲಿ ಜನರೊಂದಿಗಿದ್ದು, ಸಕ್ರಿಯವಾಗಿ ಹೋರಾಟದಲ್ಲಿ ನಿರತವಾಗಿರುವ ಸಮರ್ಥ ನಾಯಕ ನಿಂತಾಗ ಗೆಲ್ಲುವ ಅವಕಾಶವಿದೆ ಎಂದವರು ಹೇಳಿದರು.

ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಮಾಡಿದಾಗ ಅದು ಕೇವಲ ಬೋಗಸ್ ಎಂದು ಬಿಜೆಪಿ ಹೇಳಿತ್ತು. ಆದರೆ ಕೇಂದ್ರ ಸರಕಾರದ ಅಸಹಕಾರದ ನಡುವೆಯೂ ಗ್ಯಾರಂಟಿ ಸ್ಕೀಮ್ ಪರಿಣಾಮಕಾರಿಯಾಗಿ ಜಾರಿಯಾಗಿದೆ ಎಂದು ಹೇಳಿದ ರಮಾನಾಥ ರೈ, ಬಡವರಿಗೆ ಅಗತ್ಯವಾದ ಕಾರ್ಯಕ್ರಮ ಜಾರಿಗೊಳಿಸುವಲ್ಲಿ ಕಾಂಗ್ರೆಸ್ನ ಇತಿಹಾಸ ಬಲಿಷ್ಠವಾಗಿದೆ. ಇಂದಿರಾ ಗಾಂಧಿಯವರ 20 ಅಂಶಗಳ ಆರ್ಥಿಕ ಕಾರ್ಯಕ್ರಮ, ಭೂ ಮಸೂದೆ, ಬಗರ್ ಹುಕುಂ ಕಾಯ್ದೆಗಳಿಂದ ಹಿಂದೆ ಗ್ರಾಮಗಳಲ್ಲಿ ಒಂದಿಬ್ಬರು ಭೂ ಒಡೆತನ, ಹಕ್ಕುಪತ್ರ ಹೊಂದಿದ್ದರೆ ಪ್ರಸಕ್ತ ಸಾವಿರಾರು ಮಂದಿಯಾಗಿದ್ದಾರೆ. ಈ ಎಲ್ಲಾ ಸೌಲಭ್ಯಗಳು ಆಕಾಶದಿಂದ ಉದುರಿರುವುದಲ್ಲ. ಸೈದ್ಧಾಂತಿಕ ಕಾನೂನಿನ ಮೂಲಕ ಜಾರಿಯಾಗಿರುವುದು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ.ಮೋಹನ್, ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಮಮತಾ ಗಟ್ಟಿ, ಎಂ.ಎ.ಗಫೂರ್, ಕೃಪಾ ಆಳ್ವ, ಸತ್ಯನಾರಾಯಣ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಶಶಿಧರ ಹೆಗ್ಡೆ, ಯು.ಟಿ.ಫರ್ಝಾನಾ, ಶಾಲೆಟ್ ಪಿಂಟೋ, ಅಪ್ಪಿ, ನವೀನ್ ಡಿಸೋಜ, ವಿಶ್ವಾಸ್ ದಾಸ್, ಭಾಸ್ಕರ್ ಕೆ., ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡೀಕೇಟ್ ಸದಸ್ಯ ಸವಾದ್ ಸುಳ್ಯ, ಸುರೇಂದ್ರ ಕಂಬಳಿ, ತೇಜಸ್ವಿ, ಜಯಶೀಲ ಅಡ್ಯಂತಾಯ, ಫಾರೂಕ್ ಬಯಬೇ, ಶಬೀರ್, ನಝೀರ್ ಬಜಾಲ್ ಉಪಸ್ಥಿತರಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

4 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

4 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

5 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

5 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

5 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

5 hours ago