ದ.ಕ.ಜಿಲ್ಲೆಯಲ್ಲಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯ : ಜಿಲ್ಲಾಧಿಕಾರಿ ಎಚ್ಚರಿಕೆ -Vishwanews24

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕೋವಿಡ್-19 ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ. ವಿ ರಾಜೇಂದ್ರ ಆದೇಶಿಸಿರುತ್ತಾರೆ.

ಸರಕಾರದ ಜುಲೈ 30 ರ ಆದೇಶ ತೆರವು-3 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಈ ಕೆಳಕಂಡ ನಿರ್ದೇಶನಗಳನ್ನು ಸಾರ್ವಜನಿಕರು ತಪ್ಪದೆ ಪಾಲಿಸಬೇಕು.

ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ಸಮಯ ದಲ್ಲಿ ಮುಖದ ಹೊದಿಕೆಯನ್ನು ಧರಿಸುವುದು ಕಡ್ಡಾಯವಾಗಿರುತ್ತದೆ. ಅಗತ್ಯಾನುಸಾರ ಮುಖದ ಹೊದಿಕೆಯನ್ನು ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ ರೂ. 200 ಮತ್ತು ಇನ್ನುಳಿದ ಪ್ರದೇಶಗಳಲ್ಲಿ ರೂ. 100 ದಂಡ ವಿಧಿಸಲಾಗುವುದು.

ಹೆಚ್ಚುತ್ತಿರುವ ಸಾಂಕ್ರಾಮಿಕದ ಮಧ್ಯೆ ಮಾಸ್ಕ್‌ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅಗತ್ಯತೆಯ ಬಗ್ಗೆ ಮಂಗಳೂರು ನಗರದ 60 ವಾರ್ಡ್‌ಗಳಲ್ಲಿ ಜಾಗೃತಿ ಅಭಿಯಾನಗಳನ್ನು ನಡೆಸಲು ಅಧಿಕಾರಿಗಳನ್ನು ನಿಯೋಜಿಸುವಂತೆ ಅವರು ನಿಗಮ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.

ಹಾಗೆಯೇ ಈ ಆದೇಶಗಳನ್ನು ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಲಾಗುವುದು ಹಾಗೂ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಯೊಬ್ಬರು ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ 6 ಅಡಿ ಅಂತರವನ್ನು (2 ಗಜ ಅಂತರ) ಕಾಯ್ದುಕೊಳ್ಳಬೇಕು.

ಬೃಹತ್ ಸಾರ್ವಜನಿಕ ಸಭೆಗಳು ಮತ್ತು ಒಟ್ಟು ಗೂಡುವಿಕೆ ನಿಷೇಧವನ್ನು ಮುಂದುವರೆಸಲಾಗಿದೆ. ಮದುವೆ ಸಂಬಂಧಿತ ಕೂಟಗಳಲ್ಲಿ ಅತಿಥಿಗಳ ಸಂಖ್ಯೆ 50 ಮೀರಿರಬಾರದು. ಶವ ಸಂಸ್ಕಾರ/ಅಂತಿಮ ವಿಧಿ ಸಂಬಂಧಿತ ಕಾರ್ಯಗಳಿಗೆ ವ್ಯಕ್ತಿಗಳ ಸಂಖ್ಯೆ 20 ಮೀರಿರಬಾರದು.

ಸ್ಥಳೀಯ ಪ್ರಾಧಿಕಾರಗಳು, ಅದರ ಕಾನೂನು, ನಿಯಮ ಮತ್ತು ನಿಬಂಧನೆಗಳಲ್ಲಿ ತಿಳಿಸಿರುವಂತೆ ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದು ದಂಡನಾರ್ಹ ಶಿಕ್ಷೆಯಾಗಿರುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಪಾನ್, ಗುಟ್ಕಾ, ತಂಬಾಕು ಇತ್ಯಾದಿಗಳ ಬಳಕೆಯನ್ನು ನಿಷೇಧಿಸಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

14 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

14 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

14 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

14 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

15 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

15 hours ago