ಮಂಗಳೂರು:ಉಡುಪಿ ಜಿಲ್ಲೆಯ ಸಿಆರ್‌ಝೆಡ್ (ಕರಾವಳಿ ನಿಯಂತ್ರಣ ವಲಯ) ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧಿಸಿ ಹಸಿರು ಪೀಠ (ಎನ್‌ಜಿಟಿ) ಆದೇಶವಿದೆ. ಇದೇ ಆಧಾರ ಮೇಲೆ ದ.ಕ. ಜಿಲ್ಲೆಯಲ್ಲೂ ಸಿಆರ್‌ಝೆಡ್‌ನಲ್ಲೂ ಮರಳುಗಾರಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಇದೀಗ ತಡೆ ನೀಡುವಂತೆ ಮರಳುಗಾರರು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದು, ಹೈಕೋರ್ಟ್ ಜಿಲ್ಲಾಧಿಕಾರಿ ಆದೇಶಕ್ಕೆ ಮಂಗಳವಾರ ತಡೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಿಷೇಧ ಮಾಡುವಂತೆ ಮೇ 22ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ. ರಾಜೇಂದ್ರ ಆದೇಶ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೂಡಲೇ ನದಿ ತಟದಲ್ಲಿರುವ ದೋಣಿ, ಮರಳು ಸಾಗಾಣಿಕೆಗೆ ಬಳಸುವ ವಾಹನಗಳನ್ನು ತೆರವುಗೊಳಿಸುವಂತೆ ಆದೇಶಿಸಲಾಗಿತ್ತು. ಅದೀಗ ಅಸಿಂಧುಗೊಂಡಿದೆ.
ಸುಪ್ರೀಂಕೋರ್ಟ್‌ಗೆ ಮೊರೆ: ಸಿಆರ್‌ಝೆಡ್ ಮರಳುಗಾರಿಕೆಗೆ ನಿಷೇಧಿಸಿ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಹಸಿರು ಪೀಠ ಆದೇಶದ ವಿರುದ್ಧ ಸಾಂಪ್ರದಾಯಿಕ ಮರಳುಗಾರರು ಸುಪ್ರೀಂಕೋರ್ಟ್‌ಗೆ ದಾವೆ ಸಲ್ಲಿಸಿದ್ದಾರೆ. ಮರಳುಗಾರರ ಪರವಾಗಿ ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲ ದೇವದತ್ ಕಾಮತ್ ವಾದಿಸಲಿದ್ದಾರೆ.
ಆನ್‍ಲೈನ್ ಲೋನ್ ಆ್ಯಪ್ ಮೂಲಕ ಸಾಲ ನೀಡಿದವರ ಕಿರುಕುಳ : ದಂಪತಿ ಆತ್ಮಹತ್ಯೆ – Vishwanews24
ಮರಳುಗಾರರ ವಾದವೇನು?: ಕರಾವಳಿ ಜಿಲ್ಲೆಯಲ್ಲಿ ಸುಮಾರು 5 ದಶಕಗಳಿಂದ ಮರಳುಗಾರಿಕೆ ನಡೆಸಲಾಗುತ್ತಿದ್ದು, ಇದನ್ನೇ ನಂಬಿಕೊಂಡು ಸಹಸ್ರಾರು ಮಂದಿ ಬದುಕುತ್ತಿದ್ದಾರೆ. ಸಿಆರ್‌ಝೆಡ್ ಮರಳುಗಾರಿಕೆ ನಡೆಸದಿದ್ದಲ್ಲಿ ಅಳಿವೆಬಾಗಿಲು ಸುತ್ತಮತ್ತ ಮರಳು ರಾಶಿ ಬಿದ್ದು ಮೀನುಗಾರಿಕೆಗೆ ತೊಂದರೆಯಾಗಲಿದೆ. ನದಿಯಲ್ಲಿ ಮರಳು ತುಂಬಿ ನಗರ ಭಾಗದಲ್ಲಿ ಕೃತಕ ನೆರೆ ಮತ್ತಷ್ಟು ಹೆಚ್ಚಳವಾಗಲಿದೆ. ಅಕ್ರಮ ಮರಳುಗಾರಿಕೆ ನಿಯಂತ್ರಣವಾಗಿ ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಮರಳು ಸಿಗಬೇಕಾದರೆ ಮರಳುಗಾರಿಕೆ ಅನುಮತಿ ನೀಡಬೇಕಾಗಿದೆ.
ಉಡುಪಿಯಲ್ಲಿ ಅಕ್ರಮ ಮರಳುಗಾರಿಕೆ ನಿಷೇಧಿಸಿ ಎನ್‌ಜಿಟಿ ಆದೇಶ ಮಾಡಿದ್ದು, ಅದು ದಕ್ಷಿಣ ಕನ್ನಡ, ಉತ್ತರ ಕನ್ನಡಕ್ಕೆ ಅನ್ವಯವಾಗುವುದಿಲ್ಲ. ಅಕ್ರಮ ಮರಳುಗಾರಿಕೆಯನ್ನು ತಡೆಯಲಿ, ಆದೇಶ ಸಾಂಪ್ರದಾಯಿಕವಾಗಿ ಮರಳುಗಾರಿಕೆ ನಡೆಸುವವರಿಗೆ ನ್ಯಾಯಾಲಯ ಅವಕಾಶ ಮಾಡಿಕೊಂಡಬೇಕೆಂದು ಸುಪ್ರೀಂ ಕೋರ್ಟ್ ಮುಂದೆ ಅಹವಾಲು ಇರಿಸಲಾಗುವುದು ಎಂದು ಮರಳು ಕ್ರಿಯಾ ಸಮಿತಿ ಮಾಜಿ ಅಧ್ಯಕ್ಷ ಮಯೂರ್ ಉಲ್ಲಾಳ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧಿಸಿ ಹಸಿರು ಪೀಠ ಆದೇಶವಿದ್ದು, ಇದು ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡಕ್ಕೆ ಅನ್ವಯವಾಗುವುದಿಲ್ಲ ಎಂಬುದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ ದ.ಕ. ಮರಳು ಕ್ರಿಯಾ ಸಮಿತಿ ಮಾಜಿ ಅಧ್ಯಕ್ಷ ಮಯೂರ್ ಉಳ್ಳಾಲ್ ಹೇಳಿದ್ದಾರೆ.
ಮಂಗಳೂರು ಪಾಲಿಕೆ :ನೂತನ ಮೇಯರ್ ಜಯಾನಂದ , ಉಪ ಮೇಯರ್ ಪೂರ್ಣಿಮಾ ಆಯ್ಕೆ – Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…