ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26ರಿಂದ ಅಕ್ಟೋಬರ್ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಆದೇಶ ಹೊರಡಿಸಿದ್ದಾರೆ.ಸಚಿವರೊಂದಿಗೆ ಚರ್ಚಿಸಿರುವ ಶಾಸಕ ವೇದವ್ಯಾಸ್ ಕಾಮತ್ ಅವರು ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದರು.ಅದಕ್ಕೆ ಸ್ಪಂದಿಸಿರುವ ಸಚಿವರು ಅಕ್ಟೋಬರ್ 2ರ ಗಾಂಧಿ ಜಯಂತಿಯ ದಿನವನ್ನು ಹೊರತುಪಡಿಸಿ ದಸರಾ ರಜೆ ನೀಡುವಂತೆ ಸೂಚಿಸಿದ್ದಾರೆ.
ಈ ಕುರಿತು ಮಾತನಾಡಿದ ಶಾಸಕ ಕಾಮತ್, ಸೆ. 26ರಿಂದ ನವರಾತ್ರಿ ಪ್ರಾರಂಭವಾಗುತ್ತಿದ್ದು, ಅದ್ದೂರಿಯಾಗಿ ನಡೆಯುವ ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನದ ನರವಾತ್ರಿ ಸೇರಿದಂತೆ ಜಿಲ್ಲೆಯಲ್ಲಿ ಅತ್ಯಂತ ಸಂಭ್ರಮದಲ್ಲಿಹಬ್ಬವನ್ನು ಆಚರಿಸಲಾಗುತ್ತದೆ. ಆದ್ದರಿಂದ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ಮನವಿ ಮಾಡಿದ್ದೆವು ಎಂದರು.
ಉಡುಪಿಯಲ್ಲಿ ಅ. 3ರಿಂದ 16ರ ವರೆಗೆ ರಜೆ
ಉಡುಪಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 2022-23ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಅಕ್ಟೋಬರ್3ರಿಂದ 16ರ ವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗುತ್ತದೆ. ಮಂಗಳೂರಿನಲ್ಲಿ ಸ್ಥಳೀಯ ಶಾಸಕರ ಮನವಿಯಂತೆ ರಜೆ ದಿನಾಂಕ ಬದಲಾವಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಿಂದ ಆ ರೀತಿಯ ಯಾವುದೇ ಪ್ರಸ್ತಾವನೆ ಹೋಗದೇ ಇರುವುದರಿಂದ ಇಲಾಖೆಯ ಪೂರ್ವ ನಿಗದಿತ ದಿನಾಂಕದಿಂದಲೇ ದಸರಾ ರಜೆ ಆರಭವಾಗಲಿದೆ. ಹಾಗೆಯೇ ನವರಾತ್ರಿ ಉತ್ಸವಕ್ಕೆ ಸರಿ ಹೊಂದುವ ರೀತಿಯಲ್ಲಿ ರಜೆ ಹೊಂದಾಣಿಕೆ ಮಾಡಲು ಜಿಲ್ಲಾಧಿಕಾರಿಯವರಿಗೆ ಅವಕಾಶ ನೀಡಲಾಗಿದೆ. ಆದರೆ ಇದರಿಂದ ಶೈಕ್ಷಣಿಕ ತರಗತಿಗಳಿಗೆ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ.
ಪುಣೆ ರಸ್ತೆ ಅಪಘಾತ : ಸ್ಕೂಟರ್‌ಗೆ ಟ್ರಕ್ ಢಿಕ್ಕಿ.. ಮಂಗಳೂರು ಮೂಲದ ದಂತ ವೈದ್ಯೆ ಸಾವು – Vishwanews24
ಕರಾವಳಿಯ ವಾತಾವರಣ ಕೆಡಿಸಲು ಹಾಗೂ ವೋಟ್ ಬ್ಯಾಂಕ್‌ಗಾಗಿ ಕ್ಯಾಬಿನಟ್ ಸಭೆ : ಯತ್ನಾಳ್ ಲೇವಡಿ ಉಡುಪಿ: ಕರಾವಳಿಯಲ್ಲಿ ನಡೆಯಲಿರುವ ಸಚಿವ…
ಉಡುಪಿ: ವಿದ್ಯಾರ್ಥಿಗಳಿಗೆ MDMA ಮಾರಾಟ: ಇಬ್ಬರ ಬಂಧನ ಉಡುಪಿ: ವಿದ್ಯಾರ್ಥಿಗಳಿಗೆ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ…
‘ನವ ಮಂಗಳೂರು’ ನಿರ್ಮಾಣ, ಕರಾವಳಿಯ ಸರ್ವಾಂಗೀಣ ಪ್ರಗತಿಗೆ ರಾಜ್ಯ ಸರಕಾರ ಬದ್ಧ : ಸಚಿವ ಯು.ಟಿ.ಖಾದರ್ ಮಂಗಳೂರು : ಮಂಗಳೂರಿನ…
ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು ಬೆಳ್ತಂಗಡಿ : ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ…
ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಂಗಳೂರು :ನಗರದಲ್ಲಿ ಕ್ಯಾಬಿನೇಟ್ ಸಭೆ…
ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದುವರಿದಿರುವ ಮಳೆ ಕೊರತೆ ಹಾಗೂ ಒಣಹವೆ…