Featured

ದ.ಕ.ದಲ್ಲಿ ಸೆ. 26ರಿಂದ ಅ.10ರ ವರೆಗೆ ದಸರಾ ರಜೆ  – ಉಡುಪಿಯಲ್ಲಿ ಅ.3ರಿಂದ 16ರ ವರೆಗೆ ರಜೆ  – Vishwanews24

ದ.ಕ.ದಲ್ಲಿ ಸೆ. 26ರಿಂದ ಅ.10ರ ವರೆಗೆ ದಸರಾ ರಜೆ ..

ಉಡುಪಿಯಲ್ಲಿ ಅ.3ರಿಂದ 16ರ ವರೆಗೆ ರಜೆ ..

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26ರಿಂದ ಅಕ್ಟೋಬರ್‌ 10ರ ವರೆಗೆ ರಜೆ ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಆದೇಶ ಹೊರಡಿಸಿದ್ದಾರೆ.ಸಚಿವರೊಂದಿಗೆ ಚರ್ಚಿಸಿರುವ ಶಾಸಕ ವೇದವ್ಯಾಸ್‌ ಕಾಮತ್‌ ಅವರು ಹಬ್ಬಕ್ಕೆ ಪೂರಕವಾಗುವಂತೆ ರಜೆ ನೀಡಲು ಮನವಿ ಮಾಡಿಕೊಂಡಿದ್ದರು.ಅದಕ್ಕೆ ಸ್ಪಂದಿಸಿರುವ ಸಚಿವರು ಅಕ್ಟೋಬರ್‌ 2ರ ಗಾಂಧಿ ಜಯಂತಿಯ ದಿನವನ್ನು ಹೊರತುಪಡಿಸಿ ದಸರಾ ರಜೆ ನೀಡುವಂತೆ ಸೂಚಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಕಾಮತ್‌, ಸೆ. 26ರಿಂದ ನವರಾತ್ರಿ ಪ್ರಾರಂಭವಾಗುತ್ತಿದ್ದು, ಅದ್ದೂರಿಯಾಗಿ ನಡೆಯುವ ಮಂಗಳೂರು ದಸರಾ, ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿರುವ ರಥಬೀದಿ ಶಾರದಾ ಮಹೋತ್ಸವ, ಮಂಗಳಾದೇವಿ ದೇವಸ್ಥಾನದ ನರವಾತ್ರಿ ಸೇರಿದಂತೆ ಜಿಲ್ಲೆಯಲ್ಲಿ ಅತ್ಯಂತ ಸಂಭ್ರಮದಲ್ಲಿಹಬ್ಬವನ್ನು ಆಚರಿಸಲಾಗುತ್ತದೆ. ಆದ್ದರಿಂದ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ಮನವಿ ಮಾಡಿದ್ದೆವು ಎಂದರು.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಉಡುಪಿಯಲ್ಲಿ ಅ. 3ರಿಂದ 16ರ ವರೆಗೆ ರಜೆ
ಉಡುಪಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 2022-23ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಅಕ್ಟೋಬರ್‌3ರಿಂದ 16ರ ವರೆಗೆ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗುತ್ತದೆ. ಮಂಗಳೂರಿನಲ್ಲಿ ಸ್ಥಳೀಯ ಶಾಸಕರ ಮನವಿಯಂತೆ ರಜೆ ದಿನಾಂಕ ಬದಲಾವಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಿಂದ ಆ ರೀತಿಯ ಯಾವುದೇ ಪ್ರಸ್ತಾವನೆ ಹೋಗದೇ ಇರುವುದರಿಂದ ಇಲಾಖೆಯ ಪೂರ್ವ ನಿಗದಿತ ದಿನಾಂಕದಿಂದಲೇ ದಸರಾ ರಜೆ ಆರಭವಾಗಲಿದೆ. ಹಾಗೆಯೇ ನವರಾತ್ರಿ ಉತ್ಸವಕ್ಕೆ ಸರಿ ಹೊಂದುವ ರೀತಿಯಲ್ಲಿ ರಜೆ ಹೊಂದಾಣಿಕೆ ಮಾಡಲು ಜಿಲ್ಲಾಧಿಕಾರಿಯವರಿಗೆ ಅವಕಾಶ ನೀಡಲಾಗಿದೆ. ಆದರೆ ಇದರಿಂದ ಶೈಕ್ಷಣಿಕ ತರಗತಿಗಳಿಗೆ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ನಿರ್ದೇಶನ ನೀಡಲಾಗಿದೆ.

ಪುಣೆ ರಸ್ತೆ ಅಪಘಾತ : ಸ್ಕೂಟರ್‌ಗೆ ಟ್ರಕ್ ಢಿಕ್ಕಿ.. ಮಂಗಳೂರು ಮೂಲದ ದಂತ ವೈದ್ಯೆ ಸಾವು – Vishwanews24

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago