ಕಡಬ : ದ.ಕ. ಜಿಲ್ಲೆಯ ಕಡಬ ತಾಲೂಕಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಆರ್ಭಟಕ್ಕೆ ಪ್ರವಾಹದ ನೀರಿಗೆ ಬಿದ್ದ ಯುವಕ ಶರೀಫ್ ನನ್ನು ಜೀವದ ಹಂಗು ತೊರೆದು ಸೋಮಶೇಖರ್ ಎಂಬವರು ರಕ್ಷಿಸಿ ಮಾನವೀಯತೆ ಮೆರೆಯುವ ಜೊತೆಗೆ ಸೌಹಾರ್ದತೆಯ ಸಂದೇಶವನ್ನು ಸಾರಿದ್ದಾರೆ.
ಆಕಸ್ಮಿಕವಾಗಿ ನದಿಗೆ ಬಿದ್ದ ಕ್ರೇನ್ ಆಪರೇಟರ್ ಆಗಿರುವ ಮುಸ್ಲಿಂ ಯುವಕನನ್ನು ಹಿಂದೂ ಯುವಕನೊಬ್ಬ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರದಲ್ಲಿ ನಡೆದಿದೆ. ಜೆಸಿಬಿ ಆಪರೇಟರ್‍ನನ್ನು ಷರೀಫ್ ಎಂದು ಗುರುತಿಸಲಾಗಿದ್ದು, ಇವರನ್ನು ಸೋಮಶೇಖರ್ ಕಟ್ಟೆಮನೆ ರಕ್ಷಿಸಿದ್ದಾರೆ.
ಜೆಸಿಬಿಯಿಂದ ಮೇಲಕ್ಕೆತ್ತಲಾದ ಮರದ ದಿಮ್ಮಿಗಳನ್ನು ಸಾಗಿಸುವ ಸಂದರ್ಭ ಆಕಸ್ಮಾತ್ತಾಗಿ ಮರದ ದಿಮ್ಮಿಯೊಂದು ಷರೀಫ್ ಗೆ ತಾಗಿದ್ದು, ಅವರು ನಿಯಂತ್ರಣ ತಪ್ಪಿ ನದಿಗೆ ಬಿದ್ದಿದ್ದಾರೆ. ಹೀಗೆ ನದಿಗೆ ಬಿದ್ದ ಷರೀಫ್ ನೀರಿನ ರಭಸಕ್ಕೆ ಈಜಲು ಸಾಧ್ಯವಾಗದೆ ಮುಳುಗುತ್ತಿರುವುದನ್ನು ಗಮನಿಸಿದ ಸ್ಥಳೀಯ ನಿವಾಸಿ ಸೋಮಶೇಖರ್ ತಕ್ಷಣ ನದಿಗೆ ಹಾರಿ ಷರೀಫ್ ಅವರನ್ನು ಸುಮಾರು 5 ನಿಮಿಷಗಳ ಕಾಲ ಹಿಡಿದುಕೊಂಡು ನೀರಿನಲ್ಲಿ ನಿಂತರು. ನಂತರ ಹಗ್ಗ ಬಳಸಿ ಜೆಸಿಬಿ ಮುಖಾಂತರ ಅವರನ್ನು ಮೇಲಕ್ಕೆತ್ತಲಾಯಿತು.
ಸದ್ಯ ಸೋಮಶೇಖರ್ ಕ್ಟೆಮನೆ ಅವರ ಕಾರ್ಯಕ್ಕೆ ಜಿಲ್ಲೆಯಾದ್ಯಾಂತ ಭಾರೀ ಪ್ರಶಶಮಸೆ ವ್ಯಕ್ತವಾಗುತ್ತಿದೆ. ಸದ್ಯ ಶರೀಫ್ ನನ್ನು ರಕ್ಷಣೆ ಮಾಡುತ್ತೊರುವ ದೃಶ್ಯವನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ ಸೋಮಶೇಖರ್ ಅವರ ಧೈರ್ಯ ಹಾಗೂ ಸಾಹಸವನ್ನು ಜನ ಕೊಂಡಾಡುತ್ತಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…