Featured

ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ೨೦೨೧-೨೨ ನೇ ಸಾಲಿನಲ್ಲಿ ರೂ. ೩.೬೪ ಕೋಟಿ ನಿವ್ವಳ ಲಾಭ : ಯಶ್‌ಪಾಲ್ ಸುವರ್ಣ -Vishwanews24

ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ೨೦೨೧-೨೨ ನೇ ಸಾಲಿನಲ್ಲಿ ರೂ. ೩.೬೪ ಕೋಟಿ ನಿವ್ವಳ ಲಾಭ : ಯಶ್‌ಪಾಲ್ ಸುವರ್ಣ

ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ೨೦೨೧-೨೨ನೇ ಸಾಲಿನಲ್ಲಿ ೨೪೦ ಕೋಟಿ ವ್ಯವಹಾರದ ಮೂಲಕ ರೂ.೩.೬೪ ಕೋಟಿ ನಿವ್ವಳ ಲಾಭ ಗಳಿಸಿದೆ. ಕರ್ನಾಟಕ ರಾಜ್ಯ ಸರಕಾರದ ಮೀನುಗಾರಿಕ ಇಲಾಖೆ, ಸಂಸ್ಥೆಯ ಸದಸ್ಯ ಸಹಕಾರಿ ಸಂಸ್ಥೆಗಳು ವೈಯಕ್ತಿಕ ಸದಸ್ಯರು ಹಾಗೂ ಸಮಸ್ತ ಮೀನುಗಾರರ ಸಹಕಾರದಿಂದ ಮೀನು ಮಾರಾಟ, ಡೀಸಿಲ್ ಮಾರಾಟ, ಆರ್ಥಿಕ ಸೇವೆ, ಮೋಬಿಲ್ ಎಣ್ಣೆ ಮಾರಾಟ, ಸೀಮೆಎಣ್ಣೆ ಹಾಗೂ ಮೀನುಗಾರಿಕಾ ಸಲಕರಣೆಗಳ ಮಾರಾಟ ಮತ್ತು ಮಂಜುಗಡ್ಡೆ ವ್ಯವಹಾರಗಳಿಂದ ೨೪೦ ಕೋಟಿ ವ್ಯವಹಾರ ಮಾಡಿ ನಿರ್ವಹಣಾ ವೆಚ್ಚ, ಸವಕಳಿ ಮತ್ತು ಆಡಳಿತಾತ್ಮಕ ವೆಚ್ಚಗಳನ್ನು ಕಳೆದು ರೂ. ೩.೬೪ ಕೋಟಿ ನಿವ್ವಳ ಲಾಭ ದಾಖಲಿಸಿರುವುದಾಗಿ ಫೆಡರೇಶನಿನ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ.

ಮೀನುಗಾರರ ಅಭಿವೃದ್ಧಿಗಾಗಿ ಸ್ಥಾಪನೆಗೊಂಡ ಈ ಸಂಸ್ಥೆ ಮೀನುಗಾರರಿಗೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಹಕರಿಸುತ್ತಾ ಮೀನುಗಾರರ ಸ್ವಾವಲಂಬನೆಗಾಗಿ ಪ್ರಯತ್ನಿಸುತ್ತಿದ್ದು, ಹಿಂದಿನ ಹಲವು ವರ್ಷಗಳಿಂದ ಹಲವಾರು ತಾಂತ್ರಿಕ ಕಾರಣಗಳಿಂದ ನಷ್ಟದಲ್ಲಿದ್ದ ಈ ಸಂಸ್ಥೆಯು ಮೀನುಗಾರಿಕೆಗೆ ಉಂಟಾದ ಏರಿಳಿತಗಳ ಸಮಸ್ಯೆಯನ್ನು ಎದುರಿಸಿಕೊಂಡು ಇತ್ತಿಚಿನ ೧೩ ವರ್ಷಗಳಲ್ಲಿ ಒಟ್ಟು ೩೯ ಕೋಟಿ ಲಾಭ ಗಳಿಸಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸಹಕಾರಿ ಸಂಸ್ಥಗಳೊAದಿಗೆ ಗುರುತಿಸಿಕೊಂಡಿದೆ.

ಮಲ್ಪೆ, ಮಂಗಳೂರು ಮತ್ತು ಹಂಗಾರಕಟ್ಟಾ ಮೀನುಗಾರಿಕಾ ಬಂದರಿನಲ್ಲಿ ಸದಸ್ಯರಿಗೆ ಯಶಸ್ವಿ ಆರ್ಥಿಕ ಸೇವಾ ಸೌಲಭ್ಯವನ್ನು ನೀಡಲಾಗುತ್ತಿದ್ದು, ಫೆಡರೇಶನಿನ ಆರ್ಥಿಕ ಸೇವಾ ವಿಭಾಗ, ಮೀನುಗಾರಿಕ ಸಲಕರಣೆಗಳ ಮಾರಾಟ ವಿಭಾಗ ಮತ್ತು ಫೆಡರೇಶನಿನ ಕಚೇರಿಗಳಲ್ಲಿ ಗಣಕೀಕರಣವನ್ನು ಅಳವಡಿಸಿ ಸದಸ್ಯರಿಗೆ ಆಧುನಿಕ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಮುಂದಿನ ಸಾಲಿನಲ್ಲಿ ಆರ್ಥಿಕ ಸೇವಾ ವಿಭಾಗದಲ್ಲಿ ಇನ್ನಷ್ಟು ಆಧುನಿಕ ಸೌಲಭ್ಯಗಳಾದ “cash Money transfer, International & Domestic (ಇ-ಬಿಕ್ಸ್ ನಗದು ಹಣ ವರ್ಗಾವಣೆ, ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಟ್ಟದಲ್ಲಿ), ಆರ್.ಟಿ.ಜಿ.ಎಸ್ ಸೌಲಭ್ಯ, ಇ-ಸ್ಟಾಂಪಿAಗ್ ಮತ್ತು ಇತರ ಎಲ್ಲಾ ತರಹದ ಸಾಲ ಸೌಲಭ್ಯಗಳನ್ನು ನೀಡುವ ಯೋಜನೆಯನ್ನು ರೂಪಿಸಲಾಗಿದೆ.

೨೦೨೧-೨೨ ನೇ ಸಾಲಿನಲ್ಲಿಯೂ ಸಂಸ್ಥೆಯ ಸದಸ್ಯ ಸಹಕಾರಿ ಸಂಘಗಳ ೧೨೬೮ ಸದಸ್ಯರಿಗೆ ೬.೩೪ ಕೋಟಿ ವಿಮಾ ಮೌಲ್ಯದ ಸಿಗ್ನಾ ಪ್ರೋ ಹೆಲ್ತ್ ಗ್ರೂಪ್ ಇನ್ಸುರೆನ್ಸ್ ಕಾರ್ಡ್ನ್ನು ಉಚಿತವಾಗಿ ವಿತರಿಸಲಾಗಿದೆ. ದ.ಕ ಮತ್ತು ಉಡುಪಿ ಜಿಲ್ಲೆಯ ಸಂಸ್ಥೆಯ ಸದಸ್ಯರ ಮತ್ತು ಸದಸ್ಯೇತರರ ೯೦೦ ಪ್ರತಿಭಾವಂತ ಮಕ್ಕಳಿಗೆ ರೂ. ೧೮ ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ, ಕಳೆದ ಎರಡು ಮೀನುಗಾರಿಕಾ ಋತುವಿನಲ್ಲಿ ಸಂಸ್ಥೆಯೊAದಿಗೆ ವ್ಯವಹರಿಸಿದ ಗ್ರಾಹಕ ಸದಸ್ಯರಿಗೆ ೩.೭೩ ಕೋಟಿ ಮೊತ್ತದ ಪ್ರೋತ್ಸಾಹ ಧನ, ೬೩ ಸದಸ್ಯ ಸಹಕಾರಿ ಸಂಘಗಳಿಗೆ ಸುಮಾರು ೧೩ ಲಕ್ಷ ವೆಚ್ಚದಲ್ಲಿ ನೋಟ್ ಕೌಂಟಿAಗ್ ಯಂತ್ರ ವಿತರಣೆ ಮತ್ತು ಉಭಯ ಜಿಲ್ಲೆಯ ಬಡ ಮೀನುಗಾರರ ವೈದ್ಯಕೀಯ ಚಿಕಿತ್ಸೆಗಾಗಿ ಹಾಗೂ ಸಂಘ ಸಂಸ್ಥೆಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ.

ಮಲ್ಪೆ ಮೀನುಗಾರಿಕಾ ಬಂದರು ಮತ್ತು ಮಂಗಳೂರು ಮೀನುಗಾರಿಕಾ ಬಂದರಿನ ಹಲವೊಂದು ಸಮಸ್ಯೆಗಳ ಬಗ್ಗೆ ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿನ ಅಧ್ಯಕ್ಷರ ನೇತೃತ್ವದಲ್ಲಿ ಸಮಸ್ಯೆಯ ನಿವಾರಣೆಗಾಗಿ ಹಾಗೂ ಮೀನುಗಾರರು ಹಿಡಿದು ತಂದ ಮೀನಿಗೆ ಉತ್ತಮ ಮೌಲ್ಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಚಿವರನ್ನು ಭೇಟಿಯಾಗಿ ಮೀನುಗಾರಿಕೆಗೆ ಸಂಬAಧಿಸಿದ ಎಲ್ಲಾ ರೀತಿಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕ್ರಮ ಜರಗಿಸಲಾಗಿದೆ.

ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸಹಕಾರದಿಂದ ಫೆಡರೇಶನ್ ವತಿಯಿಂದ ಮಂಗಳೂರು ನಗರದ ಕೇಂದ್ರ ಭಾಗದಲ್ಲಿ ಸಹಕಾರಿ ಸಂಸ್ಥೆಗಳಿಗೆ, ಮೀನುಗಾರ ಸಂಘಗಳಿಗೆ ಮತ್ತು ಎಲ್ಲಾ ವರ್ಗದ ಮೀನುಗಾರರಿಗೆ ಅನುಕೂಲವಾಗುವ ಉದ್ದೇಶದಿಂದ ಆಧುನೀಕೃತ ಮೀನುಗಾರಿಕೆ ಮತ್ತು ಮೀನಿನ ಉತ್ಪನ್ನಗಳ ಬಗ್ಗೆ ತಾಂತ್ರಿಕ ಮಾಹಿತಿಯನ್ನು ನೀಡುವ ಉದ್ದೇಶದಿಂದ ತರಬೇತಿ ಕೇಂದ್ರವನ್ನು ಸ್ಥಾಪಿಸುವ ಬಗ್ಗೆ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಸಮುದ್ರ ಮೀನುಗಾರಿಕೆಯ ಜೊತೆಗೆ ಒಳನಾಡಿನ ಸಿಹಿ ನೀರಿನ ಮೀನುಗಾರಿಕೆಯನ್ನು ಅಭಿವೃದ್ದಿ ಪಡಿಸುವ ಉದ್ದೇಶದಿಂದ ವೈಜ್ಞಾನಿಕ ರೀತಿಯಲ್ಲಿ ಒಳನಾಡಿನ ಮೀನು ಮರಿ ಉತ್ಪಾದನೆಯ ಬಗ್ಗೆ ಮತ್ತು ಮೀನು ಸಾಕಣಿಯ ಬಗ್ಗೆ ಅಧ್ಯಯನ ಮಾಡಿರುವ ಮತ್ತು ಆಳ ಜ್ಞಾನ ಹೊಂದಿರುವವರ ಸಹಕಾರವನ್ನು ಪಡೆದು ಮೀನು ಮರಿ ಉತ್ಪಾದನೆ ಮತ್ತು ಬಿತ್ತನೆಯ ಬಗ್ಗೆ ಹೊಸ ಯೋಜನೆಯನ್ನು ಹಮ್ಮಿಕೊಳ್ಳಲಾಗುವುದು.

ಮಂಗಳೂರು ನಗರದ ಕೇಂದ್ರ ಭಾಗದಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಸುಮಾರು ೫ ಕೋಟಿ ವೆಚ್ಚದಲ್ಲಿ ಸುಸಜ್ಜಿತ ಪ್ರಧಾನ ಕಚೇರಿ ಹಾಗೂ ಸಮುದಾಯ ಭವನ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಹಾಗೂ ಕಾಪುವಿನಲ್ಲಿ ಆರ್ಥಿಕ ಸೇವಾ ವಿಭಾಗದ ಶಾಖೆಗಳ ಆರಂಭ ಹಾಗೂ ತಾಲೂಕು ಕೇಂದ್ರಗಳಲ್ಲಿ ಮತ್ಸö್ಯ ಕ್ಯಾಂಟೀನ್ ಆರಂಭಿಸುವ ಬಗ್ಗೆಯೂ ಆಡಳಿತ ಮಂಡಳಿ ಕಾರ್ಯಪ್ರವೃತ್ತವಾಗಿದೆ.

ವರದಿ ಸಾಲಿನಲ್ಲಿ ಫೆಡರೇಶನ್ ೩.೬೪ ಗರಿಷ್ಠ ಲಾಭ ಗಳಿಸಿದ್ದು, ಮುಂದೆ ಕೂಡ ಸಂಸ್ಥೆಯ ಸರ್ವ ಸದಸ್ಯರ ಸಹಕಾರ ಹಾಗೂ ಮೀನುಗಾರರ ಸಹಕಾರದಿಂದ ಸಂಸ್ಥೆಯನ್ನು ಅಭಿವೃದ್ಧಿಯಿಂದ ಉನ್ನತ ಸ್ಥಾನಕ್ಕೆ ಕೊಂಡೊಯ್ಯುವುದಾಗಿ ಅಧ್ಯಕ್ಷರಾದ ಶ್ರೀ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago