ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈಲು ಸೇವೆಯಲ್ಲಿಯ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕ್ರಮ ವಹಿಸಬೇಕು ಎಂದು ಕೋರಿ ಸಂಸದ ಕ್ಯಾ.ಬ್ರಿಜೇಶ್ ಚೌಟ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಪತ್ರ ಬರೆದಿದ್ದಾರೆ.
‘ಕೊಂಕಣ ರೈಲ್ವೆ ನಿಗಮವನ್ನು (ಕೆಆರ್‌ಸಿಎಲ್) ಭಾರತೀಯ ರೈಲ್ವೆಯ ಜೊತೆ ವಿಲೀನ ಮಾಡಬೇಕು ಎಂಬುದು ಕೊಂಕಣ ತೀರದ ಪ್ರಯಾಣಿಕರ ಬಹುಕಾಲದ ಬೇಡಿಕೆ.
ಸ್ವತಂತ್ರ ಸಂಸ್ಥೆಯಾಗಿರುವ ಕೆಆರ್‌ಸಿಎಲ್ ಹಣಕಾಸು ಬಿಕ್ಕಟ್ಟು ಎದುರಿಸುತ್ತಿದೆ. ಮುಖ್ಯ ರೈಲ್ವೆ ಮೂಲಸೌಕರ್ಯಗಳಿಗೆ ಇತರ ವಲಯಗಳನ್ನು ಅವಲಂಬಿಸಬೇಕಾಗಿದೆ. ಈ ಸಮಸ್ಯೆ ನಿವಾರಿಸಲು ಈ ವಿಲೀನ ಅವಶ್ಯ’ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
‘ಮಂಗಳೂರು-ಬೆಂಗಳೂರು ರೈಲು ಮಾರ್ಗವನ್ನು ಮೇಲ್ದರ್ಜೆಗೇರಿಸುವ ಅನಿವಾರ್ಯ ಇದೆ. ಈ ಮಾರ್ಗದಲ್ಲಿ ಶಿರಾಡಿ ಘಾಟಿ ಪ್ರದೇಶದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಬೇಕಾಗಿದೆ. ಮಂಗಳೂರು ಮತ್ತು ಬೆಂಗಳೂರು ನಡುವಿನ ಸರಕು ಸಾಗಣೆ ವೃದ್ಧಿಗೆ ಮತ್ತು ಪ್ರಯಾಣಿಕರ ರೈಲು ಸೇವೆ ಹೆಚ್ಚಳಕ್ಕೆ ಈ ಅಧ್ಯಯನ ಅತ್ಯಗತ್ಯ. ಸುಬ್ರಹ್ಮಣ್ಯ-ಸಕಲೇಶಪುರದ ಘಾಟಿ ಪ್ರದೇಶದ ಸಾಮರ್ಥ್ಯ ವೃದ್ಧಿಗಾಗಿ ರೈಲು ನಿಲುಗಡೆಗೆ ಪರ್ಯಾಯ ಹಳಿ (ಸೈಡಿಂಗ್) ನಿರ್ಮಿಸಲು ಕ್ರಮವಹಿಸಬೇಕಿದೆ’ ಎಂದು ಅವರು ವಿವರಿಸಿದ್ದಾರೆ.
‘ಅನುಷ್ಠಾನಗೊಳ್ಳುತ್ತಿರುವ ರೈಲು ಮೂಲಸೌಕರ್ಯ ವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲು ಹಾಗೂ ರೈಲ್ವೆ ಇಲಾಖೆಗೆ ಸಂಬಂಧಿಸಿ ಈ ಪ್ರದೇಶದ ಇನ್ನಿತರ ಬೇಡಿಕೆಗಳ ಈಡೇರಿಕೆಯ ಬಗ್ಗೆ ಚರ್ಚಿಸಲು ಮಂಗಳೂರಿನಲ್ಲಿ ಸಭೆ ನಡೆಸಲು ಉದ್ದೇಶಿಸಿದ್ದೇವೆ. ಸಭೆಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ದಕ್ಷಿಣ ರೈಲ್ವೆ, ನೈರುತ್ಯ ರೈಲ್ವೆ, ಕೊಂಕಣ ರೈಲ್ವೆ, ಮಂಗಳೂರು ನಗರ ಪಾಲಿಕೆ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳ ಜೊತೆ ಸಮಾಲೋಚನ ನಡೆಸಲು ನಿರ್ಧರಿಸಿದ್ದೇವೆ. ಈ ಸಭೆಯಲ್ಲಿ ಸಚಿವರಾದ ತಾವೂ ಭಾಗವಹಿಸಬೇಕು’ ಎಂದು ಅವರು ಕೋರಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…