ಮಂಗಳೂರು : ಕಾಂಗ್ರೆಸ್ ಸಮಾವೇಶ ನಡೆಯುವ ಸ್ಥಳಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಸಮಾವೇಶದ ಸಿದ್ದತೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಮತೀಯವಾದ ಅನ್ನೋದು ಒಂದು ಸೀಸನಲ್ ಜ್ವರ ಇದ್ದ ಹಾಗೆ ಕಾಲಕ್ರಮೇಣ ಆ ಜ್ವರ ಕಡಿಮೆಯಾಗುತ್ತೆ ಎಂದರು.
ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ ಮತೀಯವಾದಕ್ಕೆ ಪುಷ್ಠಿ ಕೊಡುವ ಕ್ಷೇತ್ರ, ಆ ಕಾರಣಕ್ಕಾಗಿ ಇಲ್ಲಿ ನಿರಂತರವಾಗಿ ಮತೀಯವಾದಿ ಪಕ್ಷ ಗೆಲ್ಲುತ್ತಿದೆ. ಆದರೆ ಈ ಬಾರಿ ಆ ರೀತಿ ನಡೆಯಲ್ಲ. ಮತೀಯವಾದ ಅನ್ನೋದು ಒಂದು ಸೀಸನಲ್ ಜ್ವರ ಇದ್ದ ಹಾಗೆ ಕಾಲಕ್ರಮೇಣ ಆ ಜ್ವರ ಕಡಿಮೆಯಾಗುತ್ತೆ. ದಕ್ಷಿಣಕನ್ನಡದಲ್ಲೂ ಇದೇ ಪರಿಸ್ಥಿತಿ ಆಗಲಿದೆಯ ಮತದಾರರನ್ನು ಭಾವನಾತ್ಮಕವಾಗಿ ಸೆಳೆಯುವ ಪ್ರಯತ್ನ ಬಿಜೆಪಿ ಮಾಡುತ್ತಿದೆ.
ಆದರೆ ಪ್ರತಿಬಾರಿಯೂ ಈ ತಂತ್ರ ನಡೆಯಲ್ಲ ಎಂದರು. ಮುಂದಿನ ಲೋಕಸಭಾ ಚುನಾವಣೆಯ ಅಭ್ಯರ್ಥಿಯ ಘೋಷಣೆ ಈ ಸಮಾವೇಶದಲ್ಲಿ ನಡೆಯುವುದಿಲ್ಲ, ಪಕ್ಷದ ಹೈಕಮಾಂಡ್ ಈ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಸರ್ವೇ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ.
ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷ ನನಗೆ ಎಲ್ಲಾ ಅವಕಾಶ ನೀಡಿದೆ ಈ ಬಾರಿ ಲೋಕಸಭಾ ಚುನಾವಣೆಗೆ ಅವಕಾಶ ದೊರೆತಲ್ಲಿ ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…