ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ/ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ – Vishwanews24
ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ/ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಗುರುವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ ಸಮಾವೇಶ ನಡೆಯಿತು.
13 ಕೋಟಿ ಆಸ್ತಿಯ ಒಡೆಯ ಕಾಂಗ್ರೇಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ – Vishwanews24
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಮುಖಂಡರಾದ ಸಿ.ಟಿ.ರವಿ, ವಿ.ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಅರುಣ್ ಕುಮಾರ್ ಪುತ್ತಿಲ, ದ.ಕ ಹಾಗೂ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಸಹಿತ ಪ್ರಮುಖರು ಭಾಗವಹಿಸಿದರು.
