ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಸೌಜನ್ಯಾ ಪರ ಹೋರಾಟ ಸಮಿತಿ ನೋಟ ಅಭಿಯಾನ ಹಮ್ಮಿಕೊಂಡಿದ್ದು, ಹೋರಾಟ ಗಾರರು ಈ ಬಾರಿ ನೋಟ ಮತ ಚಲಾಯಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ ಎಂದು ಸಮಿತಿಯ ಮುಖಂಡ ಗಿರೀಶ್ ಮಟ್ಟಣ್ಣನವರ್ ತಿಳಿಸಿದ್ದಾರೆ.
ನಗರದ ಪ್ರೆಸ್ ಕ್ಲಬ್ ನಲ್ಲಿ ಈ ಬಗ್ಗೆ ಶುಕ್ರವಾರ ಮಾಹಿತಿ ನೀಡಿದ ಅವರು, ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣ ಮಾತ್ರವಲ್ಲ ಅದಕ್ಕಿಂತಲೂ ಹಿಂದೆ ನಡೆದ ಆನೆ ಮಾವುತ ಪ್ರಕರಣ, ಪದ್ಮಾವತಿ ಕೊಲೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ನಡೆದ ಎಲ್ಲಾ ಹೆಣ್ಣು ಮಕ್ಕಳ ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗನೀಸುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಿರುವುದಾಗಿ ಹೇಳಿದರು.
ನೋಟ ಬಗ್ಗೆ ಜನ ಜಾಗೃತಿ ಅಗತ್ಯವಿದೆ ಎಂದು ನ್ಯಾಯಾಲಯವೇ ಹೇಳಿದೆ. ಚುನಾವಣಾ ಆಯೋಗವೂ ನಮ್ಮ ಈ ಅಭಿಯಾನಕ್ಕೆ ಸಹಕಾರ ನೀಡುವ ಜೊತೆ ಹೆಣ್ಣು ಮಕ್ಕಳ ಬಗ್ಗೆ ಪ್ರಾಧಾನ್ಯತೆ ನೀಡುವ ಈ ಅಭಿಯಾನಕ್ಕೆ ಜನರು ಸಹಕಾರ ನೀಡಬೇಕು ಎಂದರು.
ಚುನಾವಣೆ ಹಿನ್ನೆಲೆಯಲ್ಲಿ 50 ಸಾವಿರಕ್ಕಿಂತ ಹೆಚ್ಚಿನ ಹಣ ಸಾಗಿಸಲು ನಿರ್ಬಂಧ ಇದೆ. ಆದರೆ ಸಂಘದ ಹೆಸರಿನಲ್ಲಿ ಬಡ್ಡಿ ದಂಧೆಯಲ್ಲಿ ಸಂಗ್ರಹಿಸಿದ ಅಕ್ರಮ ಲಕ್ಷಗಟ್ಟಲೆ ಹಣ ಶುಕ್ರವಾರ, ಶನಿವಾರ ನಿರ್ಭೀತಿಯಿಂದ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ ಗಿರೀಶ್ ಮಟ್ಟಣ್ಣನವರ್, ಚುನಾವಣಾ ಆಯೋಗ ಈ ಬಗ್ಗೆ ಗಮನಹರಿಸಬೇಕು ಎಂದು ಆಗ್ರಹಿಸಿದರು.
ದ.ಕ. ಹಾಗೂ ಉಡುಪಿಯ ಕರಾವಳಿ ಭಾಗದಲ್ಲಿ ಈ ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ.24ರಂದು ನೋಟ ಜನಜಾಗೃತಿ ಸಭೆ ನಡೆಸುತ್ತಿ ರುವುದಾಗಿ ಪ್ರಸನ್ನ ರವಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ತಮ್ಮಣ್ಣ ಶೆಟ್ಟಿ, ಜಯನ್ ಉಪಸ್ಥಿತರಿದ್ದರು
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…