Featured

ದ. ಕ : ಶಾಲೆ ಪುನರಾರಂಭಕ್ಕೆ ಗ್ರಿನ್ ಸಿಗ್ನಲ್ ; ಸೆ. 17ರಂದು 8, 9 ಮತ್ತು 10 ನೇ ತರಗತಿ ಆರಂಭ :ಡಿಸಿ ಡಾ. ರಾಜೇಂದ್ರ.ಕೆ.ವಿ -Vishwanews24

ದಕ್ಷಿಣಕನ್ನಡ : ಶಾಲೆ ಪುನರಾರಂಭಕ್ಕೆ ಗ್ರಿನ್ ಸಿಗ್ನಲ್ ..

ಸೆ. 17ರಂದು 8, 9 ಮತ್ತು 10 ನೇ ತರಗತಿ ಆರಂಭ..

ಸೆ. 20 ರಂದು 6 ಮತ್ತು 7ನೇ ತರಗತಿ ತೆರೆಯಲು ಅವಕಾಶ..

ಶುಲ್ಕ ಪಾವತಿಗೆ ಒತ್ತಾಯಿಸುವಂತಿಲ್ಲ..

ಡಿಸಿ ಡಾ. ರಾಜೇಂದ್ರ.ಕೆ.ವಿ..

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನಲೆ ಶಾಲೆ ಪುನರಾರಂಭಿಸಿಲು ದಕ್ಷಿಣಕನ್ನಡ ಜಿಲ್ಲಾಡಳಿತ ನಿರ್ಧರಿಸಿದೆ. ಈ ಕುರಿತಂತೆ ದ.ಕ. ಜಿಲ್ಲಾಧಿಕಾರಿಗಳು ಸಭೆ ನಡೆಸಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಹಾಗೂ ಕೋವಿಡ್ ನಿಯಮ ಪಾಲಿಸಿಕೊಂಡು ಶಾಲೆ ಆರಂಭಿಸಲು ಅನುಮತಿ ನೀಡಿದ್ದಾರೆ.

ಸಭೆಯಲ್ಲಿ ಮಾತನಾಡಿದ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಕ್ಕಳಿಗೆ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಸೆಪ್ಟೆಂಬರ್ 17ರಂದು 8, 9 ಮತ್ತು 10 ನೇ ತರಗತಿಗಳನ್ನು ಆರಂಭಿಸಲು ಅನುಮತಿಸಲಾಗಿದೆ. ಅಲ್ಲದೆ, ಸೆಪ್ಟೆಂಬರ್ 20 ರಂದು 6 ಮತ್ತು 7ನೇ ತರಗತಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಎಲ್ಲಾ ಪ್ರಥಮ ಪಿ.ಯು.ಸಿ ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ. ಇನ್ನು ಶಾಲೆ ಆರಂಭಗೊಂಡ ಬಳಿಕ ಶುಲ್ಕ ಪಾವತಿಗೆ ಒತ್ತಾಯಿಸುವಂತಿಲ್ಲ ಎಂದು ಕೂಡ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈಗಾಗಲೇ ಶೇ.99 ರಷ್ಟು ಶಾಲಾ ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗಳಿಗೆ ಲಸಿಕೆಯನ್ನು ನೀಡಲಾಗಿದೆ. ಮಕ್ಕಳಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಅಂತವರಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಹಾಗೂ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪತ್ತೆ ಮಾಡಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಶಾಲೆಗಳು ಆರಂಭವಾದ ನಂತರ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ಶಿಕ್ಷಕರು ಸೂಕ್ತ ಮಾಹಿತಿಯನ್ನು ನೀಡಬೇಕು ಎಂದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago