Featured

ದ.ಕ.:ಹೆಚ್ಚುತ್ತಿರುವ ಕೊರೊನಾ ಸೋಂಕು : ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ :ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ -Vishwanews24

ದ.ಕ.:ಹೆಚ್ಚುತ್ತಿರುವ ಕೊರೊನಾ ಸೋಂಕು : ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ :ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ -Vishwanews24

ಧಾರ್ಮಿಕ ಆಚರಣೆ, ಸಭೆ ಸಮಾರಂಭಗಳಿಗೆ ಬ್ರೇಕ್

ಮಂಗಳೂರು : ಕೊರೊನಾ ವೈರಸ್‌ ಸೋಂಕು 2ನೇ ಅಲೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ, ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ , ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಮಾರ್ಚ್‌ 29ರಿಂದಲೇ 144 ಸೆಕ್ಷನ್‌ ನಿಷೇಧಾಜ್ಞೆ ಜಾರಿಯಲ್ಲಿದ್ದು ಮುಂದಿನ ಆದೇಶದವರೆಗೆ ಇದು ಮುಂದುವರಿಯಲಿದೆ. ಈ ಹಿನ್ನಲೆಯಲ್ಲಿ ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಷಬ್-ಎ- ಬರತ್ , ಗುಡ್ ಫ್ರೈಡೇ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ ಪ್ರದೇಶದಲ್ಲಿ ಸಾರ್ವಜನಿಕ ಸಮಾರಂಭಗಳನ್ನು ಸಭೆಗಳನ್ನು ನಡೆಸುವಂತಿಲ್ಲ ಎಂದು ಆದೇಶಿಸಿದ್ದಾರೆ.

ಇದಲ್ಲದೆ ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಮೇಳ, ಜಾತ್ರೆ, ಸಮಾವೇಶ, ಸಮ್ಮೇಳನ, ಆಚರಣೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೊನಾ ವೈರಸ್‌ ಸೋಂಕು ಹರಡುವ ಸಾಧ್ಯಗಳಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್‌ ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ ಮಾರ್ಚ್‌೨೯ರಿಂದ ರವರೆಗೆ ಜಿಲ್ಲೆಯಾದ್ಯಂತ ಮೇಲೆ ತಿಳಿಸಿರುವ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ಜಿಲ್ಲೆಯಾದ್ಯಂತ 5 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

11 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

20 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

20 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

20 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

20 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago