Featured

ಧರಂ ಸಿಂಗ್ ಸಿಎಂ ಸ್ಥಾನ ಕಳೆದುಕೊಳ್ಳಲು ನಾನೇ ಕಾರಣ : ಸಿಎಂ

ಬೆಂಗಳೂರು : ದಿವಂಗತ ಧರ್ಮಸಿಂಗ್ ಅವರು 2004 ರಲ್ಲಿ ಮುಖ್ಯ ಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ನಾನು ಮಾಡಿದ ತಪ್ಪೇ ಕಾರಣ. ಆದರೆ, ಅಂದಿನ ರಾಜಕೀಯ ದಲ್ಲಿ ಅನಿವಾರ್ಯವಾಗಿ ನಡೆದ ಘಟನೆ ಅದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಂದು ಹೇಳಿದ್ದಾರೆ.

ಶುಕ್ರವಾರ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ‘ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಮೊದಲ ವರ್ಷದ ಪುಣ್ಯಸ್ಮರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘2004 ರ ಧರ್ಮಸಿಂಗ್ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದಿಂದ ಉಪ ಮುಖ್ಯಮಂತ್ರಿ ಯಾಗಿದ್ದರು. ಆ ಸರ್ಕಾರದಲ್ಲಿ ನಾನು ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದೆ. ಅಂದಿನ ಸರ್ಕಾರ ಅವಧಿಗೂ ಮೊದಲೇ ಪತನಗೊಳ್ಳಲು, ಮುಖ್ಯಮಂತ್ರಿಯಾಗಿ  ಕಾರ್ಯ ನಿರ್ವಹಿಸುತ್ತಿದ್ದ ಧರ್ಮಸಿಂಗ್ ಸ್ಥಾನ ಕಳೆದುಕೊಳ್ಳಲು ಎಲ್ಲೋ ಒಂದು ಕಡೆ ನನ್ನಿಂದಲೇ ತಪ್ಪಾಯಿತೇನೋ ಎಂಬ ಭಾವನೆ ನನಗಿದೆ ’ ಎಂದರು.

‘ನಾನು ಸಿಎಂ ಆದ ಬಳಿಕ ಅವರ ಆಶೀರ್ವಾದ ಪಡೆಯಲು ಅವರ ಮನೆಗೆ ಹೋದೆ. ಆ ಸಂದರ್ಭದಲ್ಲಿ ಎಲ್ಲಿಯೂ ಅವರ ಮುಖದಲ್ಲಿ ಇವನಿಂದ ನನ್ನ ಅಧಿಕಾರ ಹೋಯಿತು ಎಂಬ ಭಾವನೆ ಕಾಣಲಿಲ್ಲ. ಅಲ್ಲದೆ, ನಾನು ಆಗಿನ ಅನಿವಾರ್ಯ ತೀರ್ಮಾನವನ್ನು ವಿವರಿಸಿ ಧರ್ಮಸಿಂಗ್ ಕ್ಷಮೆ ಕೇಳಿದೆ. ಅದಕ್ಕೆ ಅವರು, ಸ್ವಲ್ಪವೂ ಬೇಸರಗೊಳ್ಳದೆ ರಾಜಕಾರಣದಲ್ಲಿ ಇದೆಲ್ಲವೂ ಸಹಜ. ಇದೆಲ್ಲವನ್ನೂ ಮನಸ್ಸಿಗೆ ಹಚ್ಚಿಕೊಳ್ಳಬೇಡ, ಒಳ್ಳೆಯ ಕೆಲಸ ಮಾಡು ಎಂದು ಹರಸಿದರು. ಅವರ ಹೃದಯ ವೈಶಾಲ್ಯತೆಯ ಕ್ಷಣವನ್ನು ಮರೆಯಲು ಎಂದಿಗೂ ಸಾಧ್ಯವಿಲ್ಲ’ ಎಂದು ಸ್ಮರಿಸಿದರು

 

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

 

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago